Saturday, December 6, 2025
Saturday, December 6, 2025

CET Exam 2023 ದ್ವಿತೀಯ ಪಿಯು ಮತ್ತು ಸಿಇಟಿ ಪರೀಕ್ಷೆ ನಡೆಸಲು ಮುನ್ನೆಚ್ಚರಿಕೆ ಕ್ರಮ- ಡಾ.ಸೆಲ್ವಮಣಿ

Date:

CET Exam 2023 ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಹಾಗೂ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

 ಅವರು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಮೇ 23ರಿಂದ ಜೂನ್ 3ರವರೆಗೆ ಜಿಲ್ಲೆಯ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. 3312 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.

ಶಿವಮೊಗ್ಗದಲ್ಲಿ 2 ಹಾಗೂ ಭದ್ರಾವತಿ, ತೀರ್ಥಹಳ್ಳಿ, ಹೊಸನಗರ, ಸಾಗರ, ಶಿಕಾರಿಪುರ ಮತ್ತು ಸೊರಬದಲ್ಲಿ ತಲಾ ಒಂದು ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ.

ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು ಒಟ್ಟು 6 ಮಾರ್ಗಗಳನ್ನು ಗುರುತಿಸಲಾಗಿದೆ.

CET Exam 2023 ಪ್ರಶ್ನೆ ಪತ್ರಿಕೆಗಳನ್ನು ಸಾಗಾಟ ಮಾಡಲು ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದ್ದು, ಪ್ರಶ್ನೆ ಪತ್ರಿಕೆ ಸಾಗಾಟ ವಾಹನಕ್ಕೆ ಸೂಕ್ತ ಪೊಲೀಸ್ ಭದ್ರತೆಯನ್ನು ಒದಗಿಸಬೇಕು. ಈ ವಾಹನಕ್ಕೆ ಜಿಪಿಎಸ್ ಅಳವಡಿಸಿ ನಿಗಾ ವಹಿಸಲು ವ್ಯವಸ್ಥೆ ಮಾಡಬೇಕು. ಇದೇ ರೀತಿ ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಬಂದೋಬಸ್ತು ಒದಗಿಸಲು ಕ್ರಮ ಕೈಗೊಳ್ಳಬೇಕು. ಮುಖ್ಯ ಅಧೀಕ್ಷಕರು ಹಾಗೂ ಉತ್ತರ ಪತ್ರಿಕೆ ಪಾಲಕರನ್ನು ಈಗಾಗಲೇ ನೇಮಿಸಲಾಗಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತ 200ಮೀಟರ್ ವ್ಯಾಪ್ತಿಯಲ್ಲಿ ೧೪೪ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ ಎಂದು ಅವರು ಹೇಳಿದರು.

ಪರೀಕ್ಷಾ ಸಮಯದಲ್ಲಿ ಯಾವುದೇ ವಿದ್ಯುತ್ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಬೇಕು. ಪರೀಕ್ಷಾ ಕೇಂದ್ರಗಳನ್ನು ಸರಿಯಾಗಿ ಸ್ಯಾನಿಟೈಸ್ ಮಾಡಲು ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕು. ಖಜಾನೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಠೇವಣಿ ಇರಿಸುವ ಹಾಗೂ ವಿತರಿಸುವ ಪ್ರಕ್ರಿಯೆ ನಡೆಯುವ ಸ್ಥಳದಲ್ಲಿ ೨೪ಗಂಟೆ ಕಾಲ ಸಿಸಿಟಿವಿ ವ್ಯವಸ್ಥೆಯನ್ನು ಖಾತ್ರಿಪಡಿಸಬೇಕು ಎಂದು ಹೇಳಿದರು.

ಸಿಇಟಿ ಪರೀಕ್ಷೆ: 2023ನೇ ಸಾಲಿನ ಇಂಜಿನಿಯರಿಂಗ್  ಕೃಷಿ ವಿಜ್ಞಾನ ಮುಂತಾದ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಮೇ . 20 ಮತ್ತು 21ರಂದು ನಡೆಯಲಿದೆ. 

ಪರೀಕ್ಷೆ ಬೆಳಿಗ್ಗೆ 10.30ರಿಂದ 11.50ರವರೆಗೆ ಹಾಗೂ ಮಧ್ಯಾಹ್ನ 2.30ರಿಂದ 3.50 ರವರೆಗೆ ನಡೆಯಲಿದೆ.

ಶಿವಮೊಗ್ಗ, ಭದ್ರಾವತಿ ಮತ್ತು ಸಾಗರ ತಾಲೂಕಿನಲ್ಲಿ ಒಟ್ಟು 19 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಸುಸೂತ್ರವಾಗಿ ನಡೆಸಲು ಎಲ್ಲರೂ ಸಹಕರಿಸಬೇಕು ಎಂದು ಅವರು ಹೇಳಿದರು.

ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದಾರ್, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಅನಿಲ್‌ಕುಮಾರ್ ಭೂಮರಡ್ಡಿ ಸೇರಿದಂತೆ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...