Sunday, December 7, 2025
Sunday, December 7, 2025

Siddaramaiah and DK Shivakumar To Take Oath As CM and DCM At Kanteerava Stadium ಮೇ 20 ರಂದು ನೂತನ ಸೀಎಂ ಮತ್ತು ಡಿಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭ

Date:

Siddaramaiah and DK Shivakumar To Take Oath As CM and DCM At Kanteerava Stadium ಕಳೆದ ಐದು ದಿನಗಳಿಂದ ರಾಜ್ಯದಾದ್ಯಂತ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಪ್ರಶ್ನೆ ಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ತೀರ್ಮಾನದ ತೆರೆ ಎಳೆದಿದೆ.
ನೂತನ ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳ ಸ್ಥಾನಕ್ಕೆ ಡಿಕೆ ಶಿವಕುಮಾರ್ ಎಂದು ಹೈಕಮಾಂಡ್ ತೀರ್ಮಾನಿಸಿದೆ.

ಈ ಇಬ್ಬರ ನೇತೃತ್ವದ ಸರ್ಕಾರವನ್ನು ಮುನ್ನಡಿಸಲು ಕಾಂಗ್ರೆಸ್ ಹೈಕಮಾಂಡ್ ಫಾರ್ಮುಲಗಳ ಫ್ರೇಮ್ ರೆಡಿ ಮಾಡಿದೆ. ಕಾಂಗ್ರೆಸ್ ನ ಉನ್ನತ ಮೂಲಗಳ ಪ್ರಕಾರ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನಡುವೆ 50:50 ಸೂತ್ರದಲ್ಲಿ ಸಿಎಂ ಸ್ಥಾನದ ಅಧಿಕಾರ ಹಂಚಿಕೆಯಾಗಲಿದೆ.
ಮೊದಲ ಎರಡೂವರೆ ವರ್ಷ ಸಿದ್ದರಾಮಯ್ಯ ನಂತರದ ಎರಡೂವರೆ ವರ್ಷ ಡಿಕೆ ಶಿವಕುಮಾರ್.

ಕಾಂಗ್ರೆಸ್ ನಿರೀಕ್ಷೆಗೂ ಮೀರಿ 135 ಸ್ಥಾನ ಗೆಲ್ಲಲು ಪಕ್ಷ ಘೋಷಿಸಿರುವ 5 ಪ್ರಮುಖ ಗ್ಯಾರಂಟಿಗಳು ಕಾರಣವಾಗಿದೆ. ಮಹಾಲಕ್ಷ್ಮಿ ಯೋಜನೆ ಅಡಿ ಸಾಮಾನ್ಯ ಕುಟುಂಬದ ಗೃಹಿಣಿಯರಿಗೆ ಮಾಸಿಕ 2000 ರೂಪಾಯಿ, ಗೃಹಜ್ಯೋತಿ ಯೋಜನೆ ಅಡಿ ಮಾಸಿಕ 200 ಯೂನಿಟ್ ಉಚಿತ ವಿದ್ಯುತ್, ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ, ಯುವನಿಧಿ ಯೋಜನೆ ಅಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ರೂಪಾಯಿ, ಶಕ್ತಿ ಯೋಜನೆ ಅಡಿ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಗ್ಯಾರಂಟಿಯನ್ನು ಕಾಂಗ್ರೆಸ್ ನೀಡಿದ್ದು, ಅವುಗಳನ್ನು ಈಗ ಜಾರಿಗೊಳಿಸಬೇಕಿದೆ. ಈ ಐದು ಉಚಿತ ಗ್ಯಾರಂಟಿ ಯೋಜನೆಗಳ ಕುರಿತು ಶನಿವಾರ ರಚನೆಯಾಗಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂಕಿತ ಹೊರಬೀಳುವ ನಿರೀಕ್ಷೆ ಇದೆ. ಚುನಾವಣೆ ಪ್ರಚಾರ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಉಚಿತ ಗ್ಯಾರಂಟಿ ಕಾರ್ಯಕ್ರಮಗಳ ಜಾರಿಗೆ ಪ್ರಥಮ ಸಚಿವ ಸಂಪುಟ ಸಭೆಯಲ್ಲಿ ಸಹಿ ಹಾಕುವ ನಿರೀಕ್ಷೆ ಇದೆ.

ಹೈ ಕಮಾಂಡ್ ಎಚ್ಚರಿಕೆ ವಿಧಿಸಿದೆ. ಅಧಿಕಾರ ಹಂಚಿಕೆ ಕುರಿತು ಸಾರ್ವಜನಿಕವಾಗಿ ಎಲ್ಲೂ ಚರ್ಚಿಸಬಾರದು ಎಂದು ಹೇಳಿದೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮೇ. 20ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಉಪಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್ ಮತ್ತು ಸಂಪುಟ ಸದಸ್ಯರು ಕೂಡ ಇದೇ ಸಂದರ್ಭದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇದಕ್ಕಾಗಿ ಕಂಠೀರವ ಕ್ರೀಡಾಂಗಣದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿದೆ.

Siddaramaiah and DK Shivakumar To Take Oath As CM and DCM At Kanteerava Stadium 2013ರಲ್ಲಿ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾದ ಸಂದರ್ಭದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು.

ಆ ಸಂದರ್ಭದಲ್ಲಿ ಲಕ್ಷಾಂತರ ಜನರು ಆಗಮಿಸಿದ್ದರು. ಈ ಬಾರಿ ಇದಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ಹಿನ್ನಲೆಯಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಸೂಕ್ತ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.

ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್, ಹಿಮಾಚಲಪ್ರದೇಶ ಸಿಎಂ ಸುಖ್ ವಿಂದರ್ ಸಿಂಗ್ ಸುಖು, ಛತ್ತೀಸ್​​​​ಗಢ ಸಿಎಂ ಭೂಪೇಶ್ ಬಘೇಲ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಹಾರ ಸಿಎಂ ನಿತೀಶ್​ ಕುಮಾರ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಪುದುಚೆರಿ ಸಿಎಂ ರಂಗಸ್ವಾಮಿ, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಮತ್ತು NCP ಮುಖ್ಯಸ್ಥ ಶರದ್​​ ಪವಾರ್​ ಆಗಮಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...