Karnataka Institute of Co-operative Management Training Institute Shivamogga ಶಿವಮೊಗ್ಗದ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಯು ಜು.01 ರಿಂದ 06 ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಯನ್ನು ಪ್ರಾರಂಭಿಸಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಂದ ಮತ್ತು ಸಹಕಾರ ಸಂಘ/ಬ್ಯಾಂಕ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 31 ಆಗಿದೆ. ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು. ಖಾಸಗಿ ಅಭ್ಯರ್ಥಿಗಳಿಗೂ ಪ್ರವೇಶ ಪಡೆಯಲು ಅವಕಾಶವಿರುತ್ತದೆ. ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಮಾಸಿಕ ರೂ.500 ಹಾಗೂ ವಿಶೇಷ ತರಬೇತಿ ಅನ್ವಯ 30 ವರ್ಷದೊಳಗಿನ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ ರೂ.600 ಶಿಷ್ಯವೇತನ ನೀಡಲಾಗುತ್ತದೆ.
Karnataka Institute of Co-operative Management Training Institute Shivamogga ಅರ್ಜಿಯನ್ನು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ವಿನೋಬನಗರ ಇಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08182-248873 ಹಾಗೂ 7022429440 ನ್ನು ಸಂಪರ್ಕಿಸಬಹುದೆಂದು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್‍ನ ಪ್ರಾಂಶುಪಾಲರು ತಿಳಿಸಿದ್ದಾರೆ.