Rain in the State ಬೆಂಗಳೂರಿನಲ್ಲಿ ಮಳೆಗಾಲಕ್ಕೂ ಮುನ್ನವೇ ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿದಿದೆ.
ಮಳೆ ಸುರಿದ ಪರಿಣಾಮವಾಗಿ ಏಳು ಮಂದಿ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಯುವತಿಯೊಬ್ಬರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸಚಿವ ಶ್ರೀ ರಾಮಲಿಂಗ ರೆಡ್ಡಿ ಅವರೊಂದಿಗೆ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಕಾರು ಮುಳುಗಿ ಯುವತಿ ಸಾವು ಸೇರಿದಂತೆ ರಾಜ್ಯದಲ್ಲಿ ಒಂದೇ ದಿನ ಮಳೆ ಸಂಬಂಧಿತ ಅವಘಡಗಳಿಗೆ 7 ಮಂದಿ ಬಲಿಯಾಗಿದ್ದಾರೆ.
ಮೈಸೂರಿನಲ್ಲಿ ಮೂರು ಜನ ಮೃತಪಟ್ಟಿದ್ದಾರೆ. ಹುಣಸೂರು ಮತ್ತು ಪಿರಿಯಾಪಟ್ಟಣ ತಾಲೂಕಿನಲ್ಲಿ ಸಿಡಿಲು ಬಡಿದು ರೈತರು ಒಬ್ಬರು ಹೊಲದಲ್ಲಿಯೇ ಮೃತಪಟ್ಟಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ಮತ್ತೊಂದು ಘಟನೆಯಲ್ಲಿ ರೈತ ಜಮೀನಿನಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಮೃತಪಟ್ಟಿದ್ದಾರೆ. ಬಹುತೇಕ ಜಿಲ್ಲೆಗಳಲ್ಲಿ ಮಳೆಯಿಂದ ಅನಾಹುತ ಸಂಭವಿಸಿದೆ. ರಾಜ್ಯದ್ಯಂತ ಇನ್ನೆರಡು ದಿನ ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Rain in the State ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ , ದಾವಣಗೆರೆ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.