Vishwa Hindu Parishad and Bajrang Dal ದೇಶ ಕಟ್ಟುವ ಕಾರ್ಯ ಹಾಗೂ ಸಮಾಜಮುಖಿ ಸೇವೆಯಲ್ಲಿ ವಿಶ್ವ ಹಿಂದು ಪರಿಷತ್, ಬಜರಂಗದಳ ಪ್ರಮುಖ ಪಾತ್ರ ವಹಿಸಿದೆ ಎಂದು ಆರ್‌ಎಸ್‌ಎಸ್ ಜಿಲ್ಲಾ ಸಂಪರ್ಕ ಪ್ರಮುಖ್ ಡಾ. ರವಿಕಿರಣ್ ಅಭಿಪ್ರಾಯಪಟ್ಟರು.
ಶಿವಮೊಗ್ಗ ನಗರದ ಸೀಗೆಹಟ್ಟಿಯ ಜಾನಕಿ ರಾಮ ಕಲ್ಯಾಣ ಮಂದಿರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಹಿಂದೂ ಹುಲಿ ಹುತಾತ್ಮ ಹರ್ಷ 30ನೇ ಜನ್ಮ ದಿನದ ಪ್ರಯುಕ್ತ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಬಜರಂಗದಳ ರಾಷ್ಟ್ರೀಯತೆ, ಸಂಘಟನೆ ಹಾಗೂ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದೆ. ವಿನಾಕಾರಣ ರಾಜಕೀಯ ಪಕ್ಷಗಳು ಸಂಘಟನೆಯನ್ನು ದೂರುವುದು ಸರಿಯಲ್ಲ. ರಕ್ತದಾನ ಹಾಗೂ ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆ ಮಾಜಿ ಅಧ್ಯಕ್ಷ, ರಕ್ತದಾನಿ ಜಿ.ವಿಜಯ್‌ಕುಮಾರ್ ಮಾತನಾಡಿ, ರಕ್ತದಾನ ಮಾಡುವುದರಿಂದ ಸದೃಢ ಆರೋಗ್ಯ ಕಾಪಾಡಿಕೊಳ್ಳಬಹುದು. ಸದಾ ಲವಲವಿಕೆಯಿಂದ ಇರಲು ಸಾಧ್ಯವಾಗುತ್ತದೆ. ಹೃದಯಾಘಾತ ಪ್ರಮಾಣ ಕಡಿಮೆಯಾಗುತ್ತದೆ. ಜೀವ ಉಳಿಸಿದ ಮಹತ್ತರ ಕಾರ್ಯದಲ್ಲಿ ಭಾಗಿಯಾದ ತೃಪ್ತಿ ಸಿಗುತ್ತದೆ ಎಂದು ಹೇಳಿದರು.
ಎಲ್ಲ ದಾನಗಳಿಗಿಂತ ರಕ್ತದಾನ ಅತ್ಯಂತ ಮಹತ್ತರ ಹಾಗೂ ಶ್ರೇಷ್ಠ ಕಾರ್ಯವಾಗಿದೆ. ಪ್ರತಿಯೊಬ್ಬ ಆರೋಗ್ಯವಂತ ಯುವಜನತೆ ವೈದ್ಯರ ಸಲಹೆ ಅನುಸಾರ ರಕ್ತದಾನ ಮಾಡಬೇಕು. ರಕ್ತದಾನ ಶಿಬಿರಗಳನ್ನು ಆಯೋಜಿಸುವುದರಿಂದ ರಕ್ತದ ಬೇಡಿಕೆಯು ಪೂರೈಕೆ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
Vishwa Hindu Parishad and Bajrang Dal ರಕ್ತದಾನ ಶಿಬಿರದಲ್ಲಿ 48 ಯೂನಿಟ್ ರಕ್ತ ಸಂಗ್ರಹವಾಯಿತು. ಡಾ. ದಿನಕರ್, ಜಾನಕಿರಾಮ ಸೇವಾ ಸಮಿತಿ ಅಧ್ಯಕ್ಷ ಆನಂದ್, ರಾಜ್ಯಪ್ರಶಸ್ತಿ ಪುರಸ್ಕೃತ ಧರಣೇಂದ್ರ ದಿನಕರ್, ಬಜರಂಗದಳ ನಗರ ಸಂಚಾಲಕ ನಾಗೇಶ್, ವಿಶ್ವ ಹಿಂದೂ ಪರಿಷತ್ ನಗರ ಕಾರ್ಯದರ್ಶಿ ಸಚಿನ್ ರಾಯ್ಕರ್, ಮಧು, ನವೀನ್, ಪ್ರವೀಣ್, ಚಂದ್ರಶೇಖರ್, ರೆಡ್‌ಕ್ರಾಸ್ ಸಂಸ್ಥೆ, ವಿಎಚ್‌ಪಿ, ಬಜರಂಗದಳ ಸದಸ್ಯರು ಉಪಸ್ಥಿತರಿದ್ದರು.