Monday, February 2, 2026
Monday, February 2, 2026

Application Invitation for Diploma Course ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೊಮಾ ಕೋರ್ಸ್ ಗೆ ಅರ್ಜಿ ಆಹ್ವಾನ

Date:

Application Invitation for Diploma Course ಶಿವಮೊಗ್ಗ, ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯು 2023-24ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 3 ವರ್ಷಗಳ ಡಿಪ್ಲೊಮಾ ಕೋರ್ಸ್ ಸೇರಲು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ ಒಂದನ್ನು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಸಾಮಾನ್ಯ ವರ್ಗದವರಿಗೆ 15-23 ಹಾಗೂ ಪ.ಜಾ./ಪ.ಪಂ. ದವರಿಗೆ 15-25 ವಯೋಮಿತಿಯೊಳಗಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಗದಗ, ಬೆಟಗೇರಿಯ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 22 ಅಭ್ಯರ್ಥಿಗಳು, ತಮಿಳುನಾಡಿನ ಸೇಲಂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 17, ಆಂದ್ರಪ್ರದೇಶದ ನಲ್ಲೂರು ಜಿಲ್ಲೆಯ ವೆಂಕಟಗಿರಿಯ ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 3 ಅಭ್ಯರ್ಥಿಗಳು, ಕೇರಳದ ಕಣ್ಣೂರು ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 2 ಅಭ್ಯರ್ಥಿಗಳು ಒಟ್ಟು 44 ಅಭ್ಯರ್ಥಿಗಳಿಗೆ ಅವಕಾಶವಿದೆ.

ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢಿಕೃತ ಅಂಕಗಳು ಮೆರಿಟ್ ಲೆಕ್ಕಾಚಾರದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ವ್ಯಾಸಂಗ ಸಮಯದಲ್ಲಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2500/- ರಂತೆ ಶಿಷ್ಯವೇತನ ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುತ್ತದೆ ಎಂದು ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Application Invitation for Diploma Course ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ: 31/5/23ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ, ದೂ.ಸಂ.: 08372-297221 / 9448644074 ಅಥವಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಶಿವಮೊಗ್ಗ ದೂ.ಸಂ.: 08182-22405 ಅಥವಾ ಇಲಾಖೆ ವೆಬ್‌ಸೈಟ್ https://khtigadag.ac.in//Admission form.pdf ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...