Nikhil Kumaraswamy resigns as JDS youth wing president ಜೆಡಿಎಸ್ ರಾಜ್ಯಧ್ಯಕ್ಷ ಸಿಎಂ ಇಬ್ರಾಹಿಂ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಫಲಿತಾಂಶ ನನಗೆ ಅತಿವ ಬೇಸರ ಉಂಟುಮಾಡಿದೆ. ಜೊತೆಗೆ ಪಕ್ಷವನ್ನು ಹೊಸದಾಗಿ ಮರು ನಿರ್ಮಾಣ ಮಾಡುವ ಅನೇಕ ಸಾಧ್ಯತೆ ತೆರೆದಿಟ್ಟಿದೆ ಎಂಬ ವಿಶ್ವಾಸವಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.
Nikhil Kumaraswamy resigns as JDS youth wing president ವರಿಷ್ಠರಾದ ಎಚ್ ಡಿ ದೇವೇಗೌಡರು, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ನನ್ನ ಕೈಲಾದ ಮಟ್ಟಿಗೆ ಕರ್ತವ್ಯ ನಿರ್ವಹಿಸಿದ್ದೇನೆ. ಸೋಲು ಅಂತಿಮವಲ್ಲ. ಸೋಲನ್ನ ಮೆಟ್ಟಿ ಪಕ್ಷವನ್ನು ಬಲವಾಗಿ ಕಟ್ಟುವ ಬಿಸಿಯಲ್ಲಿ ನಾವೆಲ್ಲರೂ ಅರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಬೇಕಿದೆ. ಹೊಸ ನಾಯಕತ್ವಕ್ಕೆ ಅವಕಾಶ ಮಾಡಿಕೊಡಬೇಕಿದೆ. ಆ ಸಾಲಿನಲ್ಲಿ ನಾನು ರಾಜೀನಾಮೆ ನೀಡಿದ್ದು, ಅಂಗೀಕರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.