Friday, November 22, 2024
Friday, November 22, 2024

Dr. Selvamani R ಮಳೆಯಿಂದ ಸಾರ್ವಜನಿಕರಿಗೆ ತೊಂದರೆಯಾಗ ಬಹುದಾದ ಸ್ಥಳಗಳಿಗೆ ಜಿಲ್ಲಾಧಿಕಾರಿ ಭೇಟಿ

Date:

Dr. Selvamani R ಶಿವಮೊಗ್ಗ, ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಅವರು ಇಂದೂ ಸಹ ನಗರ ಹಾಗೂ ಹೊರವಲಯದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಮಳೆಯಿಂದ ಸಮಸ್ಯೆ ಎದುರಿಸಬಹುದಾದ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸೂಕ್ತ ಮುಂಜಾಗ್ರತಾ ಕ್ರಮ ಅನುಸರಿಸುವಂತೆ ಸಲಹೆ-ಸೂಚನೆ ನೀಡಿದರು.

ಪಾಲಿಕೆ ವ್ಯಾಪ್ತಿಯ ಎಲ್‍ಬಿಎಸ್ ನಗರದ ಚಾನಲ್‍ಗೆ ಭೇಟಿ ನೀಡಿ, ಚಾನಲ್‍ನಲ್ಲಿರುವ ಗಿಡಗಂಟಿ, ಕಸ ತೆಗೆಸಬೇಕು. ಇಲ್ಲವಾದಲ್ಲಿ ಮಳೆ ನೀರು ಸರಾಗವಾಗಿ ಹರಿಯದೇ ನೀರು ಹೊರಗೆ ನುಗ್ಗುವ ಸಂಭವವಿದ್ದು, ನೀರು ಸರಾಗವಾಗಿ ಹರಿಯಲು ಅನುವಾಗುವಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ತಿಳಿಸಿದರು.

ಶರಾವತಿ ನಗರ ಚಾನಲ್ ಬಳಿ ಭೇಟಿ ನೀಡಿ, ಚರಂಡಿ ಕೊಳಚೆ ನೀರನ್ನು ಚಾನಲ್‍ಗೆ ಬಿಡದಂತೆ ಕ್ರಮ ವಹಿಸಬೇಕೆಂದು ತಿಳಿಸಿದ ಅವರು ನಗರದ ಹೊರ ವಲಯದ ಗೋಪಿಶೆಟ್ಟಿಕೊಪ್ಪದ ಚಾನೆಲ್ ತಿರುವಿನಲ್ಲಿ ನೀರು ರಭಸವಾಗಿ ಹರಿಯುವುದರಿಂದ ಕಳೆದ ಬಾರಿ ಚಾನಲ್ ಏರಿ ಒಡೆದಿತ್ತು. ಈ ಬಾರಿ ಹಾಗಾಗದಂತೆ ರಾಮೇನಕೊಪ್ಪ ಬಳಿಯ ಕಾನೆಹಳ್ಳಕ್ಕೆ ನೀರು ಹರಿಸುವ ಮೂಲಕ ಆ ರಭಸವನ್ನು ಕಡಿಮೆ ಮಾಡಬಹುದೆಂದು ಸಲಹೆ ನೀಡಿದರು.

Dr. Selvamani R ವಿವಿಧ ನಾಲೆಗಳು, ರಾಜ ಕಾಲುವೆ, ಚಾನಲ್, ಚರಂಡಿಗಳನ್ನು ಪರಿಶೀಲಿಸಿ, ಮಳೆ ಆರಂಭವಾಗುವ ಮುನ್ನ ಕಸ, ಮಣ್ಣು, ಹೂಳು ತೆಗೆಸುವಂತೆ ಹಾಗೂ ಇತರೆ ಪರ್ಯಾಯ ವ್ಯವಸ್ಥೆ ಮಾಡಿ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ಕ್ರಮ ವಹಿಸುವಂತೆ ಸಣ್ಣ ನೀರಾವರಿ ಇಲಾಖೆ, ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Cooperation ಹಿರಿಯ ಸಹಕಾರಿ ಧುರೀಣ ಕೊಪ್ಪದ ಎಸ್.ಎನ್.ವಿಶ್ವನಾಥ್ ಗೆ ‘ ಸಹಕಾರಿ ರತ್ನ’ ಪ್ರಶಸ್ತಿ.

Department of Cooperation ಕರ್ನಾಟಕ ಸರ್ಕಾರದ ಕರ್ನಾಟಕ ಸಹಕಾರ ಮಹಾಮಂಡಲ ದ...

Kasturba Girls Junior College ಮಕ್ಕಳ ಪ್ರತಿಭೆ ಅನಾವರಣಗೊಳಿಸುವ ಪ್ರತಿಭಾ ಕಾರಂಜಿಗೆ ಇನ್ನಷ್ಟು ಶಕ್ತಿ ತುಂಬೋಣ- ಶಾಸಕ ಚನ್ನಬಸಪ್ಪ

Kasturba Girls Junior College ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟ್ರದ ಸಂಸ್ಕೃತಿಯನ್ನು...