Thursday, March 19, 2026
Thursday, March 19, 2026

Leopard Killed in Hunting in Hosanagara ಹೊಸನಗರ ತಾಲೂಕಿನಲ್ಲಿ ಬೇಟೆ ಉರುಳಿಗೆ ಚಿರತೆ ಬಲಿ

Date:

Leopard Killed in Hunting in Hosanagara ಹೊಸನಗರ ತಾಲೂಕಿನಲ್ಲಿ ನಗರ ಹೋಬಳಿ ವ್ಯಾಪ್ತಿಯ ಅಂಡಗದೋದೂರು ಗ್ರಾಮದ ಸರ್ವೆ ನಂಬರ್ 64 ರಲ್ಲಿ 4-5 ವರ್ಷ ಪ್ರಾಯದ ಗಂಡು ಚಿರತೆ ಕಾಡು ಪ್ರಾಣಿಗಳ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಶುಕ್ರವಾರ ಹೊಸನಗರ ವಲಯ ಅರಣ್ಯ ಅಧಿಕಾರಿ ಸಂಜಯ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಜಿಲ್ಲಾ ವನ್ಯಜೀವಿ ಸಂರಕ್ಷಣ ವಿಭಾಗದ ವೈದ್ಯರನ್ನು ಸ್ಥಳಕ್ಕೆ ಕರೆಸಿ ಮೃತ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

Leopard Killed in Hunting in Hosanagara ಚಿರತೆ ಸಾವಿಗೀಡಾಗಿ ಒಂದು ದಿನ ಕಳೆದಿದೆ. ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಅರಣ್ಯ ಇಲಾಖೆಯ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲಿ ಸೂಕ್ತ ವಿಧಿವಿಧಾನ ಕೈಗೊಳ್ಳಲಾಗಿದೆ ಎಂದು ನಗರ ವಲಯ ಆರ್.ಎಫ್.ಒ ಸಂಜಯ್ ಅವರು ಮಾಹಿತಿ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕೆಲವರ ಮೇಲೆ ಅನುಮಾನ ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮಕ್ಕೆ ಇಲಾಖೆ ಮುಂದಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...