Congress Karnataka ಸಾಗರದಲ್ಲಿ ಅಕ್ರಮ ಚಟುವಟಿಕೆಗಳ ನಿರ್ಮೂಲನೆಗೆ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ್ದೇನೆ ಎಂದು ಶಾಸಕ ಗೋಪಾಲಕೃಷ್ಣಬೇಳೂರು ಹೇಳಿದರು.
ಅವರು ಸಾಗರ ತಾಲ್ಲೂಕು ಪತ್ರಕರ್ತರ ಸಂಘ ಮತ್ತು ಪ್ರೆಸ್ ಟ್ರಸ್ಟ್ ಆಫ್ ಸಾಗರ್ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ನೂತನ ಶಾಸಕರಿಗೆ ಅಭಿನಂದನೆ ಸ್ವೀಕರಿಸಿ ಮಾತನಾಡಿ ಓಸಿ ಮಟ್ಕ , ದಂಧೆ ಸೇರಿದಂತೆ ರೌಡಿ ಚಟುವಟಿಕೆಗಳ ನಿವಾರಣೆಯಾಗಬೇಕು ಎಂದು ರಕ್ಷಣಾ ಇಲಾಖೆಗೆ ತಿಳಿಸಿದ್ದೇನೆ ಎಂದರು.
ಮಾಧ್ಯಮಗಳು ಮುಕ್ತವಾಗಿ ಕಾರ್ಯನಿರ್ವಹಿಸುವ ಮೂಲಕ ನೈಜ್ಯ ವರದಿಗಳಿಗೆ ಸಹಕರಿಸುವ ಜೊತೆಗೆ ನಿಜವಾದ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಯಾವುದೇ ಅಡಚಣೆಯಾಗದಂತೆ ಶಾಸಕನಾಗಿ ಸಂಪೂರ್ಣ ಪ್ರೋತ್ಸಾಹ ನೀಡುತ್ತೇನೆ ಎಂದರು.
ನಮ್ಮದೆ ಪಕ್ಷದ ಮುಖಂಡರು,ಸದಸ್ಯರುಗಳು ಪತ್ರಕರ್ತರುಗಳಿಗೆ ಯಾವುದೇ ಅಡಚಣೆ ಮಾಡುವುದಿಲ್ಲ.ನಮ್ಮ ವಿರುದ್ಧ ಬರುವ ವರದಿಗಳನ್ನು ಕ್ರೀಡಾಮನೋಭಾವನೆಯಿಂದ ಸ್ವೀಕರಿಸಿ ನಮ್ಮ ತಪ್ಪುಗಳಿದ್ದರೇ ತಿದ್ದಿಕೊಂಡು ನಡೆಯುವ ಮೂಲಕ ಉತ್ತಮ ಆಡಳಿತ ನೀಡಲು ಪ್ರಯತ್ನಿಸುತ್ತೇನೆ ಎಂದರು.
Congress Karnataka ಸಾಗರ ನಗರದ ಮೂಲಭೂತ ಸೌಕರ್ಯಗಳ ಕಲ್ಪಿಸುವಲ್ಲಿ ಮೊದಲ ಆದ್ಯತೆ ನೀಡುತ್ತೇನೆ,ರಸ್ತೆ,ಚರಂಡಿ ,ಕುಡಿಯುವ ನೀರು ,ವಿದ್ಯುತ್ ಹಾಗೂ ನೈರ್ಮಲ್ಯಗಳ ಕಡೆಗೆ ಹೆಚ್ಚು ಗಮನಹರಿಸುವ ಮೂಲಕ ಮಾದರಿ ಸಾಗರವನ್ನಾಗಿ ನಿರ್ಮಿಸಲು ಸಾರ್ವಜನಿಕರ ಹಾಗೂ ಪತ್ರಕರ್ತರುಗಳ ಸಲಹೆ ಸಹಕಾರ ಬೇಕು ಎಂದರು.
ಈ ಸಂದರ್ಭದಲ್ಲಿ ಪ್ರೆಸ್ ಟ್ರಸ್ಟ್ ಆಫ್ ಸಾಗರ್ ಅಧ್ಯಕ್ಷ ಹೆಚ್.ವಿ.ರಾಮಚಂದ್ರರಾವ್ ಅಧ್ಯಕ್ಷತೆ ವಹಿಸಿದ್ದರು.
ಸಾಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ಎಸ್.ವಿ.ಹಿತಕರ ಜೈನ್,ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ರಾಜೇಶ್ ಭಡ್ತಿ,ತಾಲ್ಲೂಕು ಸಂಘದ ಪ್ರಧಾನಕಾರ್ಯದರ್ಶಿ ಗಣಪತಿಶಿರಳಗಿ,ಖಜಾಂಚಿ ರಮೇಶ್ ಎನ್,ಹಿರಿಯ ಪತ್ರಕರ್ತ ಎ.ಡಿ.ಸುಬ್ರಹ್ಮಣ್ಯಭಟ್,ಪತ್ರಕರ್ತ ಕೆ.ಎನ್.ವೆಂಕಟಗಿರಿ ಮೊದಲಾದವರು ಉಪಸ್ಥಿತರಿದ್ದರು.