Wednesday, September 16, 2026
Wednesday, September 16, 2026

Application Invitation for Field Trial Training School ಸಾಣೆಹಳ್ಳಿಯ ರಂಗ ಪ್ರಯೋಗ ತರಬೇತಿ ಶಾಲೆಗೆ ಅರ್ಜಿ ಆಹ್ವಾನ

Date:

Application Invitation for Field Trial Training School ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ 2023-24ನೇ ಸಾಲಿನ ರಂಗ ಶಿಕ್ಷಣಕ್ಕೆ ಎಸ್‌ಎಸ್‌ಎಲ್‌ಸಿ / ಪದವೀಧರ ಹಾಗೂ ರಂಗಭೂಮಿಯಲ್ಲಿ ಆಸಕ್ತಿ ಇದ್ದು, ಸ್ವಲ್ಪಮಟ್ಟಿನ ಅನುಭವವಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ಹಾಗೂ ಭಾರತದ ರಂಗ ತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ, ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ. ಆಯ್ಕೆಯಾದವರಿಗೆ ಊಟ-ವಸತಿ ವ್ಯವಸ್ಥೆ ದೊರೆಯುತ್ತದೆ.

ನಿಗಧಿತ ನಮೂನೆ ಅರ್ಜಿಯನ್ನು ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ, ಸಾಣೇಹಳ್ಳಿ 577515, ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ, ಈ ವಿಳಾಸಕ್ಕೆ ಬರೆದು ತರಿಸಿಕೊಳ್ಳಬಹುದು ಅಥವಾ ವೆಬ್‌ಸೈಟ್ www.theatreschoolsanehalli.org ಯಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಈ ವಿಳಾಸಕ್ಕೆ ಜೂ.30 ರೊಳಗಾಗಿ ಸಲ್ಲಿಸುವಂತೆ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ ಪ್ರಕಟಣೆಯಲ್ಲಿ ತಿಳಿಸಿದೆ.

Application Invitation for Field Trial Training School ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9448398144,8861043553,9482942394ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...