Thursday, June 12, 2025
Thursday, June 12, 2025

Foxconn i phone company ಫಾಕ್ಸ್ ಕಾನ್ ಐ ಫೋನ್ ಕಂಪನಿ ಏಪ್ರಿಲ್ 2024 ಕ್ಕೆ ರಾಜ್ಯದಲ್ಲಿ ಫೋನ್ ಉತ್ಪಾದನೆ ಗುರಿ-ಎಂ.ಬಿ.ಪಾಟೀಲ್

Date:

Foxconn i phone company ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ 2024ರ ಏಪ್ರಿಲ್ 1ರ ವೇಳೆಗೆ ದೇವನಹಳ್ಳಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಹಸ್ತಾಂತರಿಸುವುದಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿದರು.

ಜಾರ್ಜ್ ಚು ಅವರ ನೇತೃತ್ವದಲ್ಲಿ ಕಂಪನಿ ಉನ್ನತ ಅಧಿಕಾರಿಗಳ ತಂಡವು ಸೌಜನ್ಯದ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಹೀಗೆ ಹೇಳಿದರು. ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರೂ ಹಾಜರಿದ್ದರು ‌

ಇದರೊಂದಿಗೆ ಹೊಸ ಸರ್ಕಾರವು 50,000 ಜನರಿಗೆ ಉದ್ಯೋಗ ಒದಗಿಸುವ 13,600 ಕೋಟಿ ರೂಪಾಯಿಯ ಈ ಯೋಜನೆಗೆ ಸಂಬಂಧಿಸಿದ‌ ಕಾರ್ಯವನ್ನು ಮುಂದುವರಿಸಿದಂತಾಗಿದೆ.

ದೇವನಹಳ್ಳಿ ಸಾಮಾನ್ಯ ಕೈಗಾರಿಕಾ ಪ್ರದೇಶದಲ್ಲಿ (ಐಟಿಐಆರ್) ಕಾರ್ಯಯೋಜನೆಗಾಗಿ 300 ಎಕರೆ ಗುರುತಿಸಲಾಗಿದೆ. 2024ರ ಏಪ್ರಿಲ್ 1ರ ವೇಳೆಗೆ ಇಲ್ಲಿ ಕಂಪನಿಯು ತಯಾರಿಕೆ ಶುರು ಮಾಡುವ ಗುರಿ ಹಾಕಿಕೊಂಡಿದೆ. ಇದನ್ನು ಗಮನದಲ್ಲಿಸಿಕೊಂಡು ಜುಲೈ 1ಕ್ಕೆ ಮುಂಚೆ ಕಂಪನಿಗೆ ಭೂಮಿ ಹಸ್ತಾಂತರಿಸಲಾಗುವುದು ಎಂದರು.

Foxconn i phone company ಕಂಪನಿಯು ದಿನಕ್ಕೆ 50 ಲಕ್ಷ ಲೀಟರ್ ನೀರು ಬೇಕಾಗುವುದಾಗಿ ತಿಳಿಸಿದೆ.‌ ಇದನ್ನು ಪೂರೈಸುವ ಜೊತೆಗೆ ಗುಣಮಟ್ಟದ ವಿದ್ಯುತ್, ರಸ್ತೆ ಸಂಪರ್ಕ ಇತ್ಯಾದಿ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತದೆ ಎಂದು ಪಾಟೀಲ್ ಸ್ಪಷ್ಟಪಡಿಸಿದರು.

ಕಂಪನಿಯ ಸಿಬ್ಬಂದಿಗೆ ಬೇಕಾಗುವ ಕೌಶಲ ವಿವರಗಳನ್ನು ಕೂಡ ಕೇಳಲಾಗಿದೆ. ಅದಕ್ಕೆ ತಕ್ಕಂತೆ ಸರ್ಕಾರದ ವತಿಯಿಂದ ಅರ್ಹರಿಗೆ ಕೌಶಲಗಳ ತರಬೇತಿ ಕೊಟ್ಟು ಮಾನವ ಸಂಪನ್ಮೂಲ ಲಭ್ಯವಾಗಿಸಲು ಒತ್ತು ಕೊಡುವುದಾಗಿಯೂ ಅವರು ತಿಳಿಸಿದರು.

ತೈವಾನ್ ಮೂಲದ ಮುಂಚೂಣಿ ಕಂಪನಿಯು ಮೂರು ಹಂತಗಳಲ್ಲಿ ಘಟಕ ನಿರ್ಮಾಣ ಪೂರೈಸಿ ಅಂತಿಮವಾಗಿ ಇಲ್ಲಿ ವರ್ಷಕ್ಕೆ 2 ಕೋಟಿ ಮೊಬೈಲ್‌ಗಳನ್ನು ತಯಾರಿಸುವ ಯೋಜನೆ ಹಾಕಿಕೊಂಡಿದೆ‌. ಈಗಾಗಲೇ ಭೂಮಿಗಾಗಿ ನಿಗದಿಗೊಳಿಸಿರುವ ಮೊತ್ತದಲ್ಲಿ ಶೇಕಡ 30ರಷ್ಟನ್ನು (90 ಕೋಟಿ ರೂಪಾಯಿ) ಕಂಪನಿಯು ಕೆ.ಐ.ಎ‌‌.ಡಿ.ಬಿ.ಗೆ ಪಾವತಿಸಿದೆ.

ಕಂಪನಿಯ ಪೌಲ್ ಲಿಯು, ಟಾನ್ನಿ ಲಿಯು, ಸೈಮನ್ ಸಾಂಗ್, ಭಾರತ್ ದಂಡಿ ಮತ್ತಿತರರು ಇದ್ದರು.

ಇದಕ್ಕೆ ಮುನ್ನ ಜುಬಿಲಿಯಂಟ್ ಫುಡ್ ವರ್ಕ್ಸ್ ನ ಕಾರ್ಯನಿರ್ವಾಹಕ ಉಪಾಧ್ಯಕ್ಷ ಅಮರದೀಪಸಿಂಗ್ ಅಹ್ಲುವಾಲಿಯಾ, ಎಫ್ಐಸಿಸಿಐ ಕರ್ನಾಟಕ ಮಂಡಳದ ಅಧ್ಯಕ್ಷ ಕೆ. ಉಲ್ಲಾಸ್ ಕಾಮತ್, ಕರ್ನಾಟಕ ಮಂಡಳದ ಅಧ್ಯಕ್ಷ ಶಜು ಮಂಗಳಂ, ಸಿಐಐ ಕರ್ನಾಟಕ ಮಂಡಲ ಅಧ್ಯಕ್ಷ ವಿಜಯಕೃಷ್ಣನ್ ವೆಂಕಟೇಶನ್ ಮತ್ತಿತರರು ಸಚಿವರನ್ನು ಭೇಟಿಯಾಗಿದ್ದರು.

ಐಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ವಾಣಿಜ್ಯ ‌ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಅವರು ಇದ್ದರು.

ವರದಿ ಸೌಜನ್ಯ:
ವೆಂಕಟೇಶ್ ಪ್ರಸಾದ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...