Deparment Of Railway ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು–ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಸರಕು ಸಾಗಣೆ ರೈಲುಗಳ ಮಧ್ಯೆ ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅವಘಡದಲ್ಲಿ ಕನಿಷ್ಠ 270 ಮಂದಿ ಮೃತಪಟ್ಟು, ಸುಮಾರು 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬಹನಾಗಾ ಬಜಾರ್ ನಿಲ್ದಾಣದ ಸಮೀಪ ರಾತ್ರಿ 7.20ರ ಸುಮಾರಿಗೆ ಈ ಭೀಕರ ಅವಘಡ ಸಂಭವಿಸಿದೆ. ಒಡಿಶಾದ ಈ ಮಹಾ ರೈಲು ದುರಂತಕ್ಕೆ ರೈಲು ಹಳಿಗಳಲ್ಲಿನ ದೋಷವೇ ಕಾರಣವಿರಬಹುದು ಎಂದು ಪ್ರಾಥಮಿಕವಾಗಿ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಹಳಿಗಳು ದೋಷಯುಕ್ತವಾಗಿದ್ದವೆಂದು ಶಂಕಿಸಲಾಗಿದೆ. ಆದರೆ, ತನಿಖೆಯ ನಂತರ ದುರಂತಕ್ಕೆ ನಿಖರ ಕಾರಣವೇನೆಂದು ತಿಳಿಯಲಿದೆ.
Deparment Of Railway ಒಡಿಶಾ ರೈಲು ದುರಂತಕ್ಕೆ ಪ್ರಮುಖ ವಾಗಿ ಎರಡು ಕಾರಣಗಳಿವೆ. ಮೊದಲ ಮಾನವ ದೋಷ ಮತ್ತು ಎರಡನೇ ತಾಂತ್ರಿಕ ದೋಷ. ಈ ಅಪಘಾತದ ಹಿಂದೆ ತಾಂತ್ರಿಕ ದೋಷವೇ ಕಾರಣ ಎಂದು ಹೇಳಲಾಗಿದೆ. ಸಿಗ್ನಲ್ ದೋಷದಿಂದ ಒಂದೇ ಹಳಿಯಲ್ಲಿ ಎರಡು ರೈಲುಗಳು ಬಂದು ಡಿಕ್ಕಿ ಹೊಡೆದಿವೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ.
ಬೆಂಗಳೂರು– ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಹಲವು ಬೋಗಿಗಳು ಹಳಿ ತಪ್ಪಿ ಪಕ್ಕದ ಹಳಿಯ ಮೇಲೆ ಬಿದ್ದಿದ್ದವು. ಈ ಬೋಗಿಗಳಿಗೆ ಕೋಲ್ಕತ್ತದಿಂದ ಚೆನ್ನೈ ಕಡೆಗೆ ಸಾಗುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಈ ರೈಲಿನ ಬೋಗಿಗಳೂ ಹಳಿ ತಪ್ಪಿ ಮಗುಚಿ ಬಿದ್ದವು. ಇದರಿಂದಾಗಿ ಪಕ್ಕದ ಹಳಿಯಲ್ಲಿ ಸಾಗುತ್ತಿದ್ದ ಸರಕು ಸಾಗಣೆ ರೈಲು ಸಹ ಅಪಘಾತಕ್ಕೆ ಒಳಗಾಯಿತು ಎಂದು ತಿಳಿದು ಬಂದಿದೆ.