Saturday, December 6, 2025
Saturday, December 6, 2025

Haratalu Halappa ವಿಷಪ್ರಾಶನ ಮಾಡಿದ ಮಹಿಳೆಯ ಯೋಗಕ್ಷೇಮ ವಿಚಾರಿಸಿದ ಹರತಾಳು ಹಾಲಪ್ಪ

Date:

Haratalu Halappa ಮಾಜಿ ಸಚಿವರಾದ ಹೆಚ್.ಹಾಲಪ್ಪ ನವರು, ಹಿರೇಬಿಲಗುಂಜಿ ಗ್ರಾ.ಪಂ, ಸಂಪಳ್ಳಿ ಕೋಟೆಕೊಪ್ಪ ಗ್ರಾಮದ ಬಡ ರೈತ ಕುಟುಂಬದ ಶ್ರೀಮತಿ ಪ್ರೇಮ ಕೋಂ ಬಸವರಾಜ್ ರವರ ಸ್ವಾಧೀನದಲ್ಲಿದ್ದ ಜಮೀನನ್ನು ರಾಜಕೀಯ ಪ್ರಭಾವವಿರುವ ಪುಡಾರಿಗಳು ಪೊಲೀಸರೊಂದಿಗೆ ತೆರಳಿ ದೌರ್ಜನ್ಯದಿಂದ ಕಬಳಿಸಲು ಹೋಗಿದ್ದರು.
ಆತಂಕಕ್ಕೊಳಗಾಗಿ ವಿಷ ಸೇವಿಸಿ,ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯ ಯೋಗಕ್ಷೇಮ ವಿಚಾರಿಸಿ, ಆತ್ಮಸ್ಥೈರ್ಯ ತುಂಬಿ, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.

Haratalu Halappa ನಂತರ ದೌರ್ಜನ್ಯ ಖಂಡಿಸಿ, ಪ್ರತಿಭಟನಾ ಮೆರವಣಿಗೆ ಮೂಲಕ AC ಕಛೇರಿಗೆ ಭೇಟಿ ನೀಡಿ, ಬಡ ರೈತ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಿ, ತಪ್ಪಿತಸ್ಥರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ AC ಮತ್ತು DYSP ಯವರು, ತಪ್ಪಿತಸ್ಥ ಪೊಲೀಸರ ವಿರುದ್ಧ ಇಲಾಖಾ ಕ್ರಮ ಕೈಗೊಂಡು, ಮಹಿಳೆಯ ಕುಟುಂಬಕ್ಕೆ ರಕ್ಷಣೆ ಜೊತೆಗೆ ಸಾಗುವಳಿ ಮಾಡಿಕೊಳ್ಳಲು ಅವಕಾಶ ನೀಡುವ ಬಗ್ಗೆ ಭರವಸೆ ನೀಡಿದರು.

ಮಹಿಳೆಯ ಕುಟುಂಬಸ್ಥರು, ಗ್ರಾಮಸ್ಥರು, ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...