Sharada Blind Development Centre ಶಿವಮೊಗ್ಗ ನಗರದ ಶಾರದಾ ಅಂದ ವಿಕಾಸ ಕೇಂದ್ರದಲ್ಲಿ ಮಕ್ಕಳ ಜೊತೆ ಗಿಡ ನೆಡಲಾಯಿತು. ಗಾಜನೂರು ರಸ್ತೆ ಬದಿಯ ಪ್ಲಾಸ್ಟಿಕ್ ಗಳನ್ನು ಸಂಗ್ರಹಿಸುವ ಮೂಲಕ ಪ್ಲಾಸ್ಟಿಕ್ ನಿಂದ ಪರಿಸರದ ಮೇಲೆ ಆಗುವ ದುಷ್ಪರಿಣಾಮದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಪರಿಸರ ಸಂರಕ್ಷಣೆಗೆ ಹೋರಾಟ ಮಾಡುವ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು, ಪ್ಲಾಸ್ಟಿಕ್ ನಿಂದ ಆಗುವ ಪರಿಸರ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಜೆಸಿಐ ಶಿಮೊಗ್ಗ ಸ್ಟಾರ್ ಸಂಸ್ಥೆಯ ಅಧ್ಯಕ್ಷರಾದ ಜೆಸಿ ಅಶ್ವಿನಿ ಚಂದ್ರಶೇಖರ್ ಅವರು ಸಂಸ್ಥೆಯ ಮೂಲಕ ಪಶ್ಚಿಮ ಘಟ್ಟಗಳನ್ನು ಉಳಿಸಲು ಜಾಗೃತಿ ಮೂಡಿಸಲು ಸಂಸ್ಥೆಯ ಮೂಲಕ ಅಭಿಯಾನವನ್ನು ಆಯೋಜಿಸಿರುವ ಬಗ್ಗೆ ಮಾಹಿತಿ ನೀಡಿದರು.
Sharada Blind Development Centre ಪರಿಸರಕ್ಕೆ ಸಂಬಂಧಿಸಿದ ಕ್ವಿಜ್ ಕಾರ್ಯಕ್ರಮ, ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಈಗ ಹಲವು ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುವ ಬಗ್ಗೆ ಹಾಗೂ ಮಕ್ಕಳಲ್ಲಿ ಪಶ್ಚಿಮ ಘಟ್ಟದ ಬಗ್ಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಪಶ್ಚಿಮ ಘಟ್ಟಕ್ಕೆ ಚರಣ ಕೈಗೊಳ್ಳುವ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜೆಸಿ ಅಶ್ವಿನಿ ಚಂದ್ರಶೇಖರ್ , ಗೋ ಗ್ರೀನ್ ಸಂಸ್ಥೆಯ ಅಧ್ಯಕ್ಷರಾದ ವಿಜಯಲಕ್ಷ್ಮಿ, ಕಿಶನ್ ಕಾರಣಿಕ್ ನವೀನ್ ತಲಾರಿ ಶಾರದಾ ಅಂಧ ವಿಕಾಸ ಸಂಸ್ಥೆಯ ಮಕ್ಕಳು, ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.