JDS Karnataka ವಿಧಾನಸಭಾ ಚುನಾವಣೆಯ ಸೋಲಿನ ಬೆನ್ನಲ್ಲೇ ಮುಂಬರುವ ಚುನಾವಣೆಗಳನ್ನು ಎದುರಿಸಲು ಜೆಡಿಎಸ್ ಈಗಿನಿಂದಲೇ ತೆರೆಮರೆಯಲ್ಲಿ ಸಿದ್ಧತೆ ಆರಂಭಿಸಿದೆ.
ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಹೋಗಲಿದೆಯೇ ಅಥವಾ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆಯೇ ಎಂದು ನಿರ್ಣಯಿಸಲು ಈಗಲೇ ಸಾಧ್ಯವಿಲ್ಲ ಎಂದು ಜೆಡಿಎಸ್ ನಾಯಕರೊಬ್ಬರು ತಿಳಿಸಿದ್ದಾರೆ. ಆದರೆ ಜೆಡಿಎಸ್ ನ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದು, ಅವರು ಬಿಜೆಪಿಯ ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಿರುವ ಸಾಧ್ಯತೆಯಿದೆ ಎಂದು ಕೆಲವು ಮೂಲಗಳು ಹೇಳುತ್ತಿವೆ.
JDS Karnataka ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್ ಸದ್ದಿಲ್ಲದೇ ಬಿಜೆಪಿ ಜೊತೆ ಮೈತ್ರಿಗೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಬಿಬಿಎಂಪಿ ಮತ್ತು ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯ ಫಲಿತಾಂಶದ ನಂತರ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.