Tuesday, August 25, 2026
Tuesday, August 25, 2026

Linganamakki Reservoir ಒಡಲು ಒಣಗುತ್ತಿರುವ ಶರಾವತಿ!

Date:

Linganamakki Reservoir ಲಿಂಗನಮಕ್ಕಿ ಜಲಾಶಯದಲ್ಲಿ ನೀರು ಕಡಿಮೆಯಾಗಿರುವುದರಿಂದ ಹಿನ್ನೀರು ಪ್ರದೇಶದ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಮುಪ್ಪಾನೆ ಲಾಂಚ್ ವಾರದ ಹಿಂದೆ ಸ್ಥಗಿತಗೊಂಡಿದೆ. ಹಸಿರುಮಕ್ಕಿ ಲಾಂಚ್ ಭಾನುವಾರದಿಂದ ಸ್ಥಗಿತಗೊಂಡಿದೆ. ಇದರಿಂದಾಗಿ ಈ ಭಾಗದ ಹಲವು ಹಳ್ಳಿಗಳ ನಡುವಿನ ಸಂಪರ್ಕ ಸ್ಥಗಿತಗೊಂಡಿದೆ. ಇನ್ನು ಹತ್ತು ದಿನ ಕಳೆದಲ್ಲಿ ಸಿಗಂದೂರು ಲಾಂಚ್ ನಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಲಿಂಗನಮಕ್ಕಿಗೆ ಕಾಯ್ದಿಟ್ಟ ಜಲಾಶಯಗಳಾದ ಚಕ್ರ ಮತ್ತು ಸಾವೇ ಹಕ್ಲು ಜಲಾಶಯಗಳಲ್ಲೂ ನೀರು ಕಡಿಮೆಯಾಗಿ ಹರಿವು ನಿಂತು ಹೋಗಿದೆ. ಹೀಗಾಗಿ ಶರಾವತಿ ಕಣಿವೆಯಲ್ಲಿ ವಿದ್ಯುತ್ ಉತ್ಪಾದನೆಗೆ ಲಿಂಗನಮಕ್ಕಿ ನೀರೆ ಆಧಾರವಾಗಿದೆ.

Linganamakki Reservoir ಈ ಬಾರಿ ಬೇಸಿಗೆಯಲ್ಲಿ ನಿರೀಕ್ಷಿತ ಮಳೆ ಬಾರದೆ ವಿದ್ಯುತ್ ಬೇಡಿಕೆ ಏರಿಕೆಯಾಗಿತ್ತು. ಸಾಮಾನ್ಯವಾಗಿ ಬೇಸಿಗೆಯಲ್ಲಿ ಜಲವಿದ್ಯುತ್ ಗೆ ಹೆಚ್ಚಿನ ಬೇಡಿಕೆ ಸಲ್ಲಿಸುವುದಿಲ್ಲ. ಅದರಲ್ಲೂ ಲಿಂಗನಮಕ್ಕಿ ಜಲಾಶಯದಲ್ಲಿನ ನೀರನ್ನು ಬಹಳ ಮುತವರ್ಜಿಯಿಂದ ತುರ್ತು ಸಂದರ್ಭಗಳಲ್ಲಿ ಮಾತ್ರ ಬಳಕೆ ಮಾಡಲಾಗುತ್ತದೆ. ಹೀಗಾಗಿ ಇಡೀ ಬೇಸಿಗೆಯಲ್ಲಿ ಉಷ್ಣ ವಿದ್ಯುತ್ ಸ್ಥಾವರಗಳ ಮೇಲೆ ಅಧಿಕ ಒತ್ತಡ ಬಿದ್ದಿತ್ತು. ಮುಂದಿನ 15 ದಿನದಲ್ಲಿ ಮಲೆನಾಡಿನಲ್ಲಿ ಮಳೆ ಸುರಿಯದೆ ಹೋದಲ್ಲಿ ಅನಂತನದ 10 ದಿನದಲ್ಲಿ ಲಿಂಗನಮಕ್ಕಿ ಜಲಾಶಯದಲ್ಲಿ ನೀರು ತಳ ತಲುಪಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...