Wednesday, December 17, 2025
Wednesday, December 17, 2025

Heavy Industries Karnataka ಬೆಂಗಳೂರು ಫಾಸಲೆಯಲ್ಲಿ ಸಬರ್ಬನ್ ರೈಲು ಯೋಜನೆ ವಿಸ್ತರಣೆಗೆ ಪ್ರಸ್ತಾವನೆ- ಸಚಿವ ಎಂ.ಬಿ.ಪಾಟೀಲ್

Date:

Heavy Industries Karnataka ಕೇವಲ ಬೆಂಗಳೂರು ನೆರೆಹೊರೆಯ ಪ್ರದೇಶಗಳನ್ನು ಮಾತ್ರ ಗಮನದಲ್ಲಿಟ್ಟುಕೊಂಡು ರೂಪಿಸಿರುವ ಉಪನಗರ ರೈಲು ಯೋಜನೆಯನ್ನು ಸುತ್ತಲಿನ ದೂರದ ನಗರಗಳಿಗೂ ವಿಸ್ತರಿಸಬೇಕು. ಈ ನಿಟ್ಟಿನಲ್ಲಿ ಯೋಜನೆಯನ್ನು ಪರಿಷ್ಕರಿಸಿ, ಹೊಸದಾಗಿ ಪ್ರಸ್ತಾವನೆ ಸಲ್ಲಿಸಬೇಕು. ಹೀಗಾದರೆ ಮಾತ್ರ ಬೆಂಗಳೂರಿನ ಸಂಚಾರ ದಟ್ಟಣೆಯ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಬೃಹತ್ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಸೂಚಿಸಿದ್ದಾರೆ.

ಮೂಲಸೌಕರ್ಯ ಇಲಾಖೆಯ ಅಧಿಕಾರಿಗಳ ಜತೆ ಖನಿಜ ಭವನದಲ್ಲಿ ನಡೆಸಿದ ಸುದೀರ್ಘ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು, ಈ ಮಹತ್ತ್ವದ ನಿರ್ದೇಶನ ನೀಡಿದ್ದಾರೆ.

ಈಗ 148 ಕಿ.ಮೀ. ಉದ್ದದ ಉಪನಗರ ರೈಲು ಯೋಜನೆಯ ಮೊದಲನೇ ಹಂತದ ಕಾಮಗಾರಿ ನಡೆಯುತ್ತಿದ್ದು, ಉದ್ದೇಶಿತ ಒಟ್ಟಾರೆ ಯೋಜನೆಗೆ 15,767 ಕೋಟಿ ರೂಪಾಯಿ ವೆಚ್ಚವಾಗುತ್ತಿದೆ. ಆದರೆ ಇದರ ಸದ್ಯದ ಸ್ವರೂಪದಿಂದ ಹೆಚ್ಚಿನ ಪ್ರಯೋಜನವಿಲ್ಲ. ಇದನ್ನು ರಾಮನಗರದಿಂದ ಮೈಸೂರು, ದೊಡ್ಡಬಳ್ಳಾಪುರದಿಂದ ಗೌರಿಬಿದನೂರು-ಹಿಂದೂಪುರ, ಚಿಕ್ಕಬಳ್ಳಾಪುರದಿಂದ ಕೋಲಾರಕ್ಕೆ ವಿಸ್ತರಿಸಬೇಕು. ಈ ಸಂಬಂಧ ಯೋಜನೆಯನ್ನು ಪರಿಷ್ಕರಿಸಿ, ಮಂಡಳಿ ಮುಂದೆ ಹೊಸದಾಗಿ ಪ್ರಸ್ತಾವನೆ ಸಲ್ಲಿಸಬೇಕು ಎಂದು ಅವರು ವಿವರಿಸಿದರು.

ಸದ್ಯಕ್ಕೆ ಸಬರ್ಬನ್ ರೈಲು ಯೋಜನೆಯನ್ನು ರಾಮನಗರ, ಚಿಕ್ಕಬಾಣಾವರ, ದೊಡ್ಡಬಳ್ಳಾಪುರ, ವೈಟ್ ಫೀಲ್ಡ್ ವರೆಗೆ ಮುಟ್ಟಿಸುವ ಗುರಿ ಇದೆ. ಆದರೆ ಇವೆಲ್ಲವೂ ಈಗಾಗಲೇ ಬೆಂಗಳೂರಿನ ಭಾಗವಾಗಿವೆ. ಆದ್ದರಿಂದ ರಾಜಧಾನಿಯ ಸುತ್ತಲಿನ ನೂರು ಕಿ.ಮೀ. ಸುತ್ತಳತೆಯಲ್ಲಿ ಇರುವ ನಗರಗಳಿಗೆ ಸಬರ್ಬನ್ ರೈಲು ಸೌಕರ್ಯ ಒದಗಿಸಬೇಕು. ಬೆಂಗಳೂರಿನ ಉದ್ದಿಮೆಗಳಿಗೆ ಬೇಕಾದ ಜನರು ಈ ಊರುಗಳಿಂದ ಸುಗಮವಾಗಿ ದಿನವೂ ಓಡಾಡುವಂತೆ ಆಗಬೇಕು. ಇದು ಸಂಚಾರ ದಟ್ಟಣೆಯ ಜತೆಗೆ ವಲಸೆಯ ಸಮಸ್ಯೆಗೂ ಕಡಿವಾಣ ಹಾಕುತ್ತದೆ ಎಂದು ಅವರು ವಿವರಿಸಿದ್ದಾರೆ.

Heavy Industries Karnataka ಹಂತ-1ರ ಅಡಿಯಲ್ಲಿ ಈಗಾಗಲೇ ಚಿಕ್ಕಬಾಣಾವರ ಮತ್ತು ಬೆನ್ನಿಗಾನಹಳ್ಳಿ ನಡುವೆ ಕಾಮಗಾರಿ ನಡೆಯುತ್ತಿದೆ. ಇದನ್ನು ತುಮಕೂರಿನ ಕಡೆಯಲ್ಲಿ ಡಾಬಸಪೇಟೆಯ ತನಕ ವಿಸ್ತರಿಸಬೇಕು. ಅಲ್ಲಿ ಕೈಗಾರಿಕಾ ಪ್ರದೇಶ ಇರುವ ಹಿನ್ನೆಲೆಯಲ್ಲಿ ಇದು ಅತ್ಯಗತ್ಯವಾಗಿದೆ. ಈ ಕೆಲಸವನ್ನು ಮೊದಲ ಹಂತದಲ್ಲೇ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರತೀ ಹತ್ತು ನಿಮಿಷಕ್ಕೆ ಒಂದರಂತೆ ಸಬರ್ಬನ್ ರೈಲು ಸೇವೆ ಒದಗಿಸುವುದು ನಮ್ಮ ಗುರಿಯಾಗಿದೆ. ಸುಗಮ ಸಂಚಾರ ವ್ಯವಸ್ಥೆಯ ಜಾಲವನ್ನು ಬೆಳೆಸುವುದು ಮೂಲಸೌಲಭ್ಯ ಅಭಿವೃದ್ಧಿಯ ಹೆಗ್ಗುರಿಗಳಲ್ಲಿ ಒಂದಾಗಿದೆ ಎಂದು ಪಾಟೀಲ್ ಹೇಳಿದ್ದಾರೆ.

ಸಭೆಯಲ್ಲಿ ಕೆ-ರೈಡ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಮೂಲಸೌಲಭ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ರೈಲ್ವೆ ಇಲಾಖೆಯ ಉನ್ನತ ಅಧಿಕಾರಿಗಳು ಹಾಜರಿದ್ದರು.

ಇದೇ ಸಂದರ್ಭದಲ್ಲಿ ಸಚಿವರು, ಕೈಗಾರಿಕಾ ಇಲಾಖೆಯ ನಾಲೆಡ್ಜ್ ಪಾರ್ಟನರ್ ಆಗಿರುವ ಬೋಸ್ಟನ್ ಕನ್ಸಲ್ಟೆನ್ಸಿ ಗ್ರೂಪ್ ಜತೆ ರಾಜ್ಯದಲ್ಲಿ ಮುಂದಿನ ಐದು ವರ್ಷಗಳ ಅವಧಿಯಲ್ಲಿ ಕೈಗೆತ್ತಿಕೊಳ್ಳಬಹುದಾದ ಕೈಗಾರಿಕಾ ಯೋಜನೆಗಳನ್ನು ಕುರಿತು ವಿಸ್ತೃತ ವಿಚಾರ ವಿನಿಮಯ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...