KSRTC Shivamogga ಸರಕಾರದ ನೂತನ ಶಕ್ತಿ ಯೋಜನೆಗೆ ಜೂ.11ರಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ,ಉಚಿತ ಪ್ರಯಾಣಕ್ಕೆ ಮಹಿಳೆಯರಿಗೆ ಸ್ಮಾರ್ಟ್‌ಕಾರ್ಡ್ ನೀಡಲಾಗುವುದು. ಆ ದಿನ ಬೇರೆ ಬೇರೆ ಜಿಲ್ಲೆಗಳಲ್ಲಿ ಸ್ಥಳೀಯ ಶಾಸಕರು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
KSRTC Shivamogga ಸ್ಮಾರ್ಟ್ ಕಾರ್ಡ್‌ಗೆ ಸೇವಾಸಿಂಧು ಆಯಪ್ ಮೂಲಕ ಅರ್ಜಿ ಹಾಕಬೇಕು. 3 ತಿಂಗಳೊಳಗೆ ಅರ್ಜಿ ಹಾಕಿ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಬೇಕು. ಸ್ಮಾರ್ಟ್ ಕಾರ್ಡ್ ವೆಚ್ಚವನ್ನು ಸರಕಾರವೇ ಭರಿಸಲಿದೆ. ಸ್ಮಾರ್ಟ್ ಕಾರ್ಡ್ ನೀಡುವವರೆಗೂ ಮಹಿಳೆಯರು ಆಧಾರ್ ಕಾರ್ಡ್ ಸೇರಿದಂತೆ ಇನ್ನಿತರ ಗುರುತಿನ ಚೀಟಿಯನ್ನು ಪಡೆದೆ ಬಸ್‌ನಲ್ಲಿ ಪ್ರಯಾಣಿಸಬಹುದು.