Cyclone in the Southeast Arabian Sea ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಎದ್ದಿದೆ ಎನ್ನುವುದನ್ನು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಚಂಡಮಾರುತಕ್ಕೆ ‘ಬಿಪರ್ಜೋಯ್’ ಎನ್ನುವ ಹೆಸರನ್ನು ಬಾಂಗ್ಲಾದೇಶ ಇಟ್ಟಿದೆ.
ಇದು ಬಹುತೇಕ ಉತ್ತರದ ಕಡೆಗೆ ಚಲಿಸುವ ಸಾಧ್ಯತೆಯಿದ್ದು, ಕ್ರಮೇಣ ತೀವ್ರ ರೂಪ ಪಡೆಯುವ ಸಾಧ್ಯತೆ ಇದೆ. ಚಂಡಮಾರುತದ ಹಿನ್ನೆಲೆಯಲ್ಲಿ ಕೊಂಕಣ-ಗೋವಾ-ಮಹಾರಾಷ್ಟ್ರ ಕರಾವಳಿಯಲ್ಲಿ ಜೂನ್ 8 ರಿಂದ 10 ರವರೆಗೆ ಅತಿ ಎತ್ತರದ ಅಲೆಗಳು ಏಳುವ ಸಾಧ್ಯತೆಯಿದೆ.
Cyclone in the Southeast Arabian Sea ಈ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿದ ಮೀನುಗಾರರು ಮರಳುವಂತೆ ಸೂಚಿಸಲಾಗಿದೆ.
ಈ ಚಂಡಮಾರುತ ಆಗ್ನೇಯ ಮತ್ತು ಪಕ್ಕದ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಲ್ಲಿ ಗಂಟೆಗೆ ನಾಲ್ಕು ಕಿಲೋಮೀಟರ್ ವೇಗದಲ್ಲಿ ಉತ್ತರದ ಕಡೆಗೆ ಚಲಿಸುತ್ತಿದೆ ಎಂದು ತಿಳಿಸಿದೆ.