Monday, February 2, 2026
Monday, February 2, 2026

Lumpy Skin Disease ಚರ್ಮಗಂಟು ರೋಗದ ವಿರುದ್ಧ ಜಿಲ್ಲೆಯಲ್ಲಿ ದನಗಳಿಗೆ ಲಸಿಕಾಕರಣ

Date:

Lumpy Skin Disease 2023-24 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಎಲ್ಲ ಗ್ರಾಮಗಳಲ್ಲಿರುವ ದನಗಳಿಗೆ ಚರ್ಮಗಂಟು ರೋಗದ ವಿರುದ್ದ ದಿನಾಂಕ: 12-06-2023 ರಿಂದ 30-06-2023 ರವರೆಗೆ ಮೇಕೆ ಸಿಡುಬು(ಗೋಟ್ ಪಾಕ್ಸ್) ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಚರ್ಮಗಂಟು ರೋಗವು ಕ್ಯಾಪ್ರಿ ಫಾಕ್ಸ್ ವೈರಾಣುವಿನಿಂದ ಬರುವ ಸಾಂಕ್ರಾಮಿಕ ರೋಗವಾಗಿದ್ದು, ಮೇಕೆ ಸಿಡುಬು ಲಸಿಕೆಯಿಂದ ಇದನ್ನು ತಡೆಗಟ್ಟಬಹುದಾಗಿದೆ. ಕಳೆದ 2022-23 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಸದರಿ ರೋಗೋದ್ರೇಕವು ಅತಿ ಹೆಚ್ಚಾಗಿ ಮಳೆಗಾಲ ಮುಕ್ತಾಯವಾದ ಕೂಡಲೇ ಕಂಡುಬಂದಿದ್ದು, ಪ್ರಸ್ತುತ ಮಳೆಗಾಲ ಪ್ರಾರಂಭವಾಗುತ್ತಿದ್ದು ಮಳೆಗಾಲದಲ್ಲಿ ಹೆಚ್ಚಾಗುವ ಸೊಳ್ಳೆ, ನೊಣ ಹಾಗೂ ಕೀಟಗಳ ಕಡಿತದಿಂದ ರೋಗವು ಜಾನುವಾರುವಿನಿಂದ ಜಾನುವಾರುವಿಗೆ ಹರಡುವುದರಿಂದ ಮುಂಜಾಗ್ರತಾ ಕ್ರಮವಾಗಿ ರೋಗದ ವಿರುದ್ದ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Lumpy Skin Disease ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯನ್ನು ತಾಲ್ಲೂಕುವಾರು, ಗ್ರಾಮವಾರು ತಯಾರಿಸಲಾಗಿದ್ದು, ಪಶುಪಾಲನಾ ಇಲಾಖೆಯ ಅಧಿಕಾರಿ/ಸಿಬ್ಬಂದಿಯನ್ನೊಳಗೊಂಡ ಲಸಿಕಾ ತಂಡಗಳು ವೇಳಾಪಟ್ಟಿಯಂತೆ ಆಯಾ ಗ್ರಾಮಗಳಿಗೆ ಭೇಟಿ ನೀಡಿ ದನಗಳಿಗೆ ಉಚಿತವಾಗಿ ಲಸಿಕೆಯನ್ನು ಹಾಕಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶು ಚಿಕಿತ್ಸಾ ಸಂಸ್ಥೆಗಳನ್ನು ಸಂಪರ್ಕಿಸಬಹುದೆಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಶಿವಯೋಗಿ ಬಿಯಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...