Thursday, August 13, 2026
Thursday, August 13, 2026

Sahyadri Commerce College ಇಲಾಖಾ ಪರೀಕ್ಷೆಗಳಿಗೆ ಸರ್ವ ಸಿದ್ಧತೆ- ಡಾ.ಸೆಲ್ವಮಣಿ

Date:

Sahyadri Commerce College 2021 ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳು ನಡೆಯಲಿದ್ದು ಜಿಲ್ಲೆಯಲ್ಲಿ ಶಾಂತಿಯುತವಾಗಿ ಪರೀಕ್ಷೆ ನಡೆಯಲು ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸೂಚಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಇಲಾಖಾ ಪರೀಕ್ಷೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್, ಸರ್ಕಾರಿ ಪಿಯು ಕಾಲೇಜು, ಸಹ್ಯಾದ್ರಿ ವಾಣಿಜ್ಯ ಕಾಲೇಜು ಮತ್ತು ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಒಟ್ಟು 04 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷೆಗಳು ಜೂನ್ 09 ರಿಂದ 11 ಮತ್ತು ಜೂನ್ 26 ರಿಂದ ಜುಲೈ 09(29-06-2023 ರಿಂದ 03-07-2023 ರ ದಿನಗಳನ್ನು ಹೊರತುಪಡಿಸಿ) ರವರೆಗೆ ನಡೆಯಲಿವೆ.

Sahyadri Commerce College ಈಗಾಗಲೇ ಸ್ಥಳೀಯ ನಿರೀಕ್ಷಣಾಧಿಕಾರಿ, ವೀಕ್ಷಕರು ಮತ್ತು ಮಾರ್ಗಾಧಿಕಾರಿಗಳನ್ನು ನೇಮಿಸಿ ಪರೀಕ್ಷೆ ಸಂಬಂಧ ಅನುಸರಿಸಬೇಕಾದ ಮಾರ್ಗಸೂಚಿ ಮತ್ತು ಸೂಚನೆಗಳನ್ನು ನೀಡಲಾಗಿದೆ. ಪರೀಕ್ಷಾ ಅವಧಿಯಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪ್ರತಿ ಕೇಂದ್ರಗಳಿಗೂ ಇಬ್ಬರಂತೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

ಪರೀಕ್ಷಾರ್ಥಿಗಳಿಗೆ ಸೂಕ್ತ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಅಭ್ಯರ್ಥಿಗಳು ಮೊಬೈಲ್, ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ ಎಂದು ಸೂಚನೆ ನೀಡಿದರು.

ಪರೀಕ್ಷಾ ದಿನಗಳಂದು ಯಾವುದೇ ಅಹಿತರ ಘಟನೆಗಳಿಗೆ ಅವಕಾಶ ನೀಡದಂತೆ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ.ಫಾಸಲೆಯವರೆಗೆ ಬೆಳಿಗ್ಗೆ 8 ರಿಂದ ಸಂಜೆ 5.30 ರವರೆಗೆ ಸಿಆರ್‍ಪಿಸಿ ಸೆಕ್ಷನ್ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.

ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಂಡು ಯಾವುದೇ ರೀತಿಯ ಗೊಂದಲಗಳಿಗೆ ಒಳಗಾಗದೇ, ಶಾಂತಿಯುತವಾಗಿ ಪರೀಕ್ಷೆಗಳನ್ನು ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಡಯಟ್ ಪ್ರಾಂಶುಪಾಲರಾದ ಬಸವರಾಜಪ್ಪ, ಜಿಲ್ಲಾ ಖಜನಾಧಿಕಾರಿ ಸಾವಿತ್ರಿ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಶಿವಯೋಗಿ ಯಲಿ, ಸೈನಿಕ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ಇತರೆ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...