Saturday, March 21, 2026
Saturday, March 21, 2026

DC Shivamogga ಎಸ್ಎಸ್ಎಸ್ ಎಲ್ ಸಿ ಪೂರಕ ಪರೀಕ್ಷೆ ಸಿದ್ದತೆಗೆ ಜಿಲ್ಲಾಧಿಕಾರಿಗಳ ಸೂಚನೆ

Date:

DC Shivamogga 2023 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗಳು ಜಿಲ್ಲೆಯಲ್ಲಿ ಜೂನ್ 12 ರಿಂದ 19 ರವರೆಗೆ ನಡೆಯಲಿದ್ದು ಸುವ್ಯವಸ್ಥಿತ ಮತ್ತು ಶಾಂತಿಯುತವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯ ಪೂರ್ವಸಿದ್ದತೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಸೂಚನೆಗಳನ್ನು ನೀಡಿದರು.

ಒಟ್ಟು 3523 ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಜಿಲ್ಲೆಯ ಒಟ್ಟು 14 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜೂನ್ 12 ರಂದು ಪ್ರಥಮ ಭಾಷೆ, ಜೂ.13 ರಂದು ವಿಜ್ಞಾನ, ಜೂ.14 ರಂದು ದ್ವಿತೀಯ ಭಾಷೆ, ಜೂನ್ 15 ಸಮಾಜ ವಿಜ್ಞಾನ, ಜೂನ್ 16 ರಂದು ತೃತೀಯ ಭಾಷೆ, ಜೂನ್ 17 ರಂದು ಗಣಿತ, ಜೂನ್ 19 ರಂದು ಇತರೆ ಕೋರ್ ವಿಷಯಗಳ ಪರೀಕ್ಷೆ ನಡೆಯಲಿದೆ.

DC Shivamogga ಈಗಾಗಲೇ 14 ಮುಖ್ಯ ಅಧೀಕ್ಷಕರರು, 14 ಜನ ಸ್ಥಾನಿಕ ಜಾಗೃತ ದಳ ಅಧಿಕಾರಿ, 7 ಜನ ಮಾರ್ಗಾಧಿಕಾರಿ, 7 ಮೊಬೈಲ್ ಸ್ವಾಧೀನಾಧಿಕಾರಿ, 9 ಜನ ವೀಕ್ಷಕರನ್ನು ನೇಮಿಸಲಾಗಿದೆ. ಹಾಗೂ ಕೊಠಡಿ ಮೇಲ್ವಿಚಾರಕು, ಸಿಬ್ಬಂದಿ ನಿಯೋಜನೆ ಆಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಮತ್ತು ಇತರೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ.

ಪರೀಕ್ಷಾ ದಿನಗಳಂದು ಯಾವುದೇ ಅಹಿತರ ಘಟನೆಗಳಿಗೆ ಅವಕಾಶ ನೀಡದಂತೆ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ.ಫಾಸಲೆಯವರೆಗೆ ಸಿಆರ್‍ಪಿಸಿ ಸೆಕ್ಷನ್ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಆಸನ/ಪೀಠೋಪಕರಣ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿ, ಒದಗಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕಾರ್ಯನಿರ್ವಹಣೆ ಖಾತರಿಪಡಿಸಿಕೊಳ್ಳಬೇಕು ಎಂದ ಅವರು ಸುವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಸಕಲ ಸಿದ್ದತೆ ಬಗ್ಗೆ ಸೂಚನೆ ನೀಡಿದರು.

ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಮಾತನಾಡಿ, ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ವಿವರಿಸಿದರು.

ಸಭೆಯಲ್ಲಿ ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ಡಯಟ್ ಪ್ರಾಚಾರ್ಯ ಬಸವರಾಜಪ್ಪ, ಶಿಕ್ಷಣಾಧಿಕಾರಿಗಳು, ಅಧಿಕಾರಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ramadan ಸಮಾಜದಲ್ಲಿ ಶಾಂತಿ – ಸೌಹಾರ್ದದಿಂದ ಬಾಳಬೇಕು- ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ

Ramadan ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು...

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ...

Ugadi ಸೊರಬದಿಂದ ಚಂದ್ರಗುತ್ತಿವರೆಗೆ ವಕೀಲರ ಬಳಗದಿಂದ ಪಾದಯಾತ್ರೆ.

Ugadi ಯುಗಾದಿ ಹಬ್ಬದ ಅಂಗವಾಗಿ ತಾಲೂಕಿನ ವಕೀಲರ ಬಳಗದ ವತಿಯಿಂದ ಪಟ್ಟಣದ...

DC shivamogga ಹಣದಾಸೆಗೆ ಸರ್ಕಾರಿ ದಾಖಕೆಗಳ ನಕಲಿ ಸೃಷ್ಟಿಸುವವರ ಬಗ್ಗೆ ಜಾಗರೂಕರಾಗಿರಿ- ‘ಡೀಸಿ ‘ಪ್ರಭುಲಿಂಗ ಕವಳಿಕಟ್ಟಿ.

DC shivamogga ಹಣದಾಸೆಗಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ಮಾಡಿ, ಖಾಸಗಿ‌ ವ್ಯಕ್ತಿಗಳಿಗೆ ಜಮೀನು...