Congress Karnataka ಕಾಂಗ್ರೆಸ್ ನೇತೃತ್ವದ ರಾಜ್ಯಸರ್ಕಾರ ಐದು ಗ್ಯಾರಂಟಿಗಳನ್ನು ಜನತೆಗೆ ತಲುಪಿಸುವ ನಿಟ್ಟಿನಲ್ಲಿ ಸಾಕಾರಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದೆ.
ಇದನ್ನು ಸಹಿಸಲಾಗದೇ ಬಿಜೆಪಿ ಹಾಗೂ ಜೆಡಿಎಸ್‌ನವರು ಇಲ್ಲಸಲ್ಲದ ಹೇಳಿಕೆ ನೀಡುವ ಮೂಲಕ ಅಪಪ್ರಚಾರದಲ್ಲಿ ತೊಡಗಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಕಿಸಾನ್ ಸೆಲ್ ರಾಜ್ಯ ಕಾರ್ಯದರ್ಶಿ ಸಿ.ಎನ್.ಅಕ್ಮಲ್ ಆರೋಪಿಸಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಜೆಡಿಎಸ್ ಹಾಗೂ ಬಿಜೆಪಿ ಅಧಿಕಾರದ ಸಮಯದಲ್ಲಿ ಎಷ್ಟೆಲ್ಲಾ ಯೋಜನೆಗಳನ್ನು ಜನತೆಗೆ ಪೂರೈಸಿದೆ. ರೈತರಿಗೆ ಎಷ್ಟು ಸಾಲ ವಿತರಣೆಯಾಗಿದೆ ಎಂದು ಸಾಬೀತುಪಡಿಸಲಿ. ಇದನ್ನು ಬಿಟ್ಟು ಕಾಂಗ್ರೆಸ್ ಸರ್ಕಾರದ ಮೇಲೆ ಕೆಸರೇಚುವ ಕೆಲಸದಲ್ಲಿ ತೊಡಗುವುದು ಸೂಕ್ತವಲ್ಲ ಎಂದಿದ್ದಾರೆ.
ಕಾಂಗ್ರೆಸ್ ಯೋಜನೆಗಳು ರಾಜ್ಯವನ್ನು ದಿವಾಳಿಯನ್ನಾಗಿಸುತ್ತದೆ ಎಂದು ವಿರೋಧ ಪಕ್ಷದ ನಾಯಕರುಗಳು ಹೇಳುತ್ತಿದ್ದಾರೆ.
ಆದರೆ ಕೇಂದ್ರ ಸರ್ಕಾರ ಸಾವಿರಾರು ಕೋಟಿ ಹಣವನ್ನು ಉದ್ಯಮಿಗಳಿಗೆ ನೀಡಿ ಸಾಲಮನ್ನಾ ಮಾಡುವುದರಲ್ಲಿ ನಿರಂತರಾಗಿದ್ದು ಇದರಿಂದ ದೇಶ ದಿವಾಳಿಯಾಗುವುದಿಲ್ಲ ಎಂದು ಪ್ರಶ್ನಿಸಿದ ಅವರು ಮೊದಲು ದೇಶವನ್ನು ಸಾಲದಿಂದ ಮುಳುಗದಂತೆ ನೋಡಿಕೊಳ್ಳಿ ಎಂದು ಹೇಳಿದ್ದಾರೆ.
Congress Karnataka ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ 03 ಲಕ್ಷ ಕೋಟಿಯಷ್ಟು ತೆರಿಗೆ ಹಣ ಸಂಗ್ರಹವಾಗಲಿದೆ. ನಂತರ ರಾಜ್ಯಕ್ಕೆ ಕೇವಲ 50 ಸಾವಿರ ಕೋಟಿ ಮಾತ್ರ ನೀಡಲಾಗುತ್ತಿದೆ. ಉಳಿದ ಮೊತ್ತವನ್ನು ದೊಡ್ಡ ದೊಡ್ಡ ಉದ್ಯಮಿಗಳ ಸಾಲವನ್ನು ತೀರಿಸಲಾಗುತ್ತಿದೆಯೇ. ಈಗಾಗಲೇ ಸರ್ಕಾರಿ ಕಚೇರಿಗಳನ್ನು ಖಾಸಗೀಕರಣಗೊಳಿಸಿ ಅದೋಗತಿಗೆ ತಂದೊಡ್ಡಲಾಗಿದ್ದು ಇದನ್ನು ಮೊದಲು ಪ್ರಶ್ನಿಸಬೇಕು ಎಂದಿದ್ದಾರೆ.
ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯಸರ್ಕಾರ ಪ್ರಾರಂಭವಾಗಿ ಒಂದು ತಿಂಗಳೊಳಗೆ ಎಲ್ಲಾ ಜಿಲ್ಲಾ ಉಸ್ತುವಾರಿ ಮಂತ್ರಿಗಳನ್ನು ನೇಮಕ ಮಾಡಲಾಗಿದೆ. ಇದೇ ಪರಿಸ್ಥಿತಿ ಬಿಜೆಪಿ ಹಾಗೂ ಜೆಡಿಎಸ್ ಅಧಿಕಾರ ತೆಗೆದುಕೊಂಡ ಸಮಯದಲ್ಲಿ ಮಂತ್ರಿ ಮಂಡಲ ಸ್ಥಾಪಿಸಲು ಎಷ್ಟು ದಿನ ಕಳೆದಿದೆ ಎಂದು ಅರ್ಥೈಸಿಕೊಳ್ಳಿ ಎಂದು ಸವಾಲೆಸೆದಿದ್ದಾರೆ.
ಮುಂದಿನ ದಿನಗಳಲ್ಲಾದರೂ ವಿರೋಧ ಪಕ್ಷದ ನಾಯಕರುಗಳು ಆಡುವ ಮಾತಿನಲ್ಲಿ ನಿಗಾವಹಿಸದಿದ್ದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಯಾವ ರೀತಿಯ ಸೋಲಾನುಭವಿಸಿ ಮನೆಗೆ ತೆರಳಿದ್ದಾರೆ ಅದೇ ರೀತಿಯಲ್ಲಿ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಜನತೆ ಮನೆಯಲ್ಲೇ ಕೂರಿಸುವ ಕೆಲಸ ಮಾಡಲು ಹಿಂಜರಿಯುವುದಿಲ್ಲ ಎಂದಿದ್ದಾರೆ.