Sunday, April 12, 2026
Sunday, April 12, 2026

Department Of Women and Child Welfare ಜೂನ್ 15 ರಂದು ವಿಶ್ವ ಹಿರಿಯ ನಾಗರಿಕರ ನಿಂದನೆ ವಿರುದ್ಧ ಜಾಗೃತಿ ದಿನ

Date:

Department Of Women and Child Welfare ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್- ಬೆಂಗಳೂರು, ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿ -14567 ಹಾಗೂ ಶಿವಮೊಗ್ಗ ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಜೂನ್-15ರಂದು ಬೆಳಗ್ಗೆ ಪತ್ರಿಕಾ ಭವನ, ಆರ್.ಟಿ.ಓ.ರಸ್ತೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಿಶ್ವ ಹಿರಿಯ ನಾಗರಿಕರ ನಿಂದನೆ ವಿರುದ್ಧ ಜಾಗೃತಿ ದಿನ-2023 ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ನೌಕರರ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ಕಾಲೇಜು ವಿದ್ಯಾರ್ಥಿಗಳ ಬೀದಿನಾಟಕದೊಂದಿಗೆ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Department Of Women and Child Welfare ಜಾಥಾದಲ್ಲಿ ಹಿರಿಯ ನಾಗರಿಕರ ಸಂಘಗಳು, ಅನುದಾನಿತ ಮತ್ತು ಅನುದಾನರಹಿತ ವೃದ್ಧಾಶ್ರಮಗಳು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು/ ಎನ್.ಎಸ್.ಎಸ್. ವಿದ್ಯಾರ್ಥಿಗಳು ಭಾಗವಹಿಸುತ್ತಾರೆ.

ಈ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳಾದ ಡಾ|| ಸೆಲ್ವಮಣ ಆರ್. ಉದ್ಘಾಟಿಸಲಿದ್ದಾರೆ. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀಮತಿ ಶಿಲ್ಪಾ ಎಂ ದೊಡ್ಡಮನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಹಾಗೂ ಉಪವಿಭಾಗಾಧಿಕಾರಿ ರವಿಚಂದ್ರ ನಾಯಕ್ ಉಪಸ್ಥಿತರಿರುವರು.

ಮುಖ್ಯ ಅತಿಥಿಗಳಾಗಿ ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಸಂತೋಷ್ ಕುಮಾರ್ ಹೆಚ್. ಪಾಲ್ಗೊಳ್ಳಲಿದ್ದಾರೆ.

ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿ.ಕಾ.ಸೇ.ಪ್ರಾ. ದ ಸದಸ್ಯ ಕಾರ್ಯದರ್ಶಿಗಳಾದ ಸಿ.ಎನ್.ಚಂದನ್ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಾಸಕರಿಗೆ ನೀಡುವ ಅನುದಾನದಲ್ಲಿ ಪ್ರತೀ ವರ್ಷ ₹10 ಲಕ್ಷ ವಿಶೇಷಚೇತನರ ಅಭಿವೃದ್ಧಿಗೆ ನೀಡುವೆ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ವಿಶೇಷಚೇತನರ ಸಾಧನೆಗಳು ಕೂಡ ವಿಶೇಷವಾಗಿದ್ದು, ಅವರ ಸಾಧನೆಗಳನ್ನು ಉತ್ತೇಜಿಸಿ,...

DC shivamogga ಹುಲಿಕಲ್ ಘಾಟಿ ಮಣ್ಣಿನ ಕುಸಿತ. ಮೃತ ಕಾರ್ಮಿಕರ ಕುಟುಂಬಗಳಿಗೆ ಡೀಸಿ ಪ್ರಭುಲಿಂಗ ಕವಳಿಕಟ್ಟಿ ಸಾಂತ್ವನ

DC shivamogga ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಬಾಳೆಬರೆ...

Mescom ಏಪ್ರಿಲ್ 12. ಶಿವಮೊಗ್ಗದ ವಿನಾಯಕ ನಗರ, ರವೀಂದ್ರ ನಗರ‌ ಸುತ್ತಮುತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Mescom ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ...