Monday, December 15, 2025
Monday, December 15, 2025

JCI Shivamogga ಲಿಂಗಬೇಧವಿಲ್ಲದೇ ಆರೋಗ್ಯವಂತರು ರಕ್ತದಾನ ಮಾಡಬಹುದು- ಜೆಸಿ ಅಶ್ವಿನಿ ಚಂದ್ರಶೇಖರ್

Date:

JCI Shivamogga ಶಿವಮೊಗ್ಗ ನಗರದ ಅಶಾಜ್ಯೋತಿ ಸ್ವಯಂ ಸೇವಕ ರಕ್ತನಿಧಿ ಕೇಂದ್ರದಲ್ಲಿ ಜೆಸಿಐ ಶಿವಮೊಗ್ಗ ಸ್ಟಾರ್ಸ್ ಸಂಸ್ಥೆ ಯಿಂದ ರಕ್ತದಾನ ಮಾಡುವ ಮೂಲಕ ವಿಶ್ವ ರಕ್ತದಾನಿಗಳ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜೆಸಿಐ ಶಿವಮೊಗ್ಗ ಸ್ಟಾರ್ಸ್ ಅಧ್ಯಕ್ಷರಾದ ಜೆಸಿ ಅಶ್ವಿನಿ ಚಂದ್ರಶೇಖರ್ ಅವರು ಮಾತನಾಡಿ, ರಕ್ತಕ್ಕೆ ಪರ್ಯಾಯವಾದ ವಸ್ತುವಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ರಕ್ತವನ್ನು ಮನುಷ್ಯರ ದಾನದಿಂದ ಮಾತ್ರ ಪಡೆಯಬಹುದು. ರಕ್ತದಾನ ಮಾಡುವುದು ಪ್ರತೀ ಆರೋಗ್ಯವಂತ ವ್ಯಕ್ತಿಯ ಕರ್ತವ್ಯ ಆಗಾಗ ರಕ್ತದಾನ ಮಾಡಿದಲ್ಲಿ ಮಾತ್ರ ರೋಗಗ್ರಸ್ಥರು ಮತ್ತು ಗಾಯಗೊಂಡವರನ್ನು ಬದುಕಿಸಲು ಸಾಧ್ಯ. ರಕ್ತದಾನ ಮಾಡಿದ ದಾನಿಯ ದೇಹದಲ್ಲಿ ರಕ್ತದ ಉತ್ಪತ್ತಿ ಪ್ರಾರಂಭವಾಗಿ 24 ಗಂಟೆಯ ಒಳಗಾಗಿ ದಾನ ಮಾಡಿದ ಪ್ರಮಾಣದ ರಕ್ತ ದೇಹದಲ್ಲಿ ಪುನರುತ್ಪತ್ತಿಯಾಗುತ್ತದೆ.

ಹೆಣ್ಣು ಗಂಡ ಎಂಬ ಬೇಧವಿಲ್ಲದೇ 18 ರಿಂದ 60 ವರ್ಷದ ಒಳಗಿರುವ ಎಲ್ಲಾ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು. ಗಂಡಸರು 3 ತಿಂಗಳಿಗೊಮ್ಮೆ ಮತ್ತು ಹೆಂಗಸರು 4 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ದಾನಿಯ ದೇಹದ ತೂಕ 45 ಕೆ.ಜಿ ಗಿಂತ ಹೆಚ್ಚಿರಬೇಕು. ರಕ್ತದಲ್ಲಿ ಹಿಮೋಗ್ಲೋಬಿನ್ ಅಂಶ 12.5 ಗ್ರಾಂ ಗಿಂತ ಹೆಚ್ಚಿರಬೇಕು ಎಂದು ಮಾಹಿತಿ ನೀಡಿದರು.

JCI Shivamogga ಜೆಸಿಐ ಸಂಸ್ಥೆಯಿಂದ ನೀಡ್ ಬ್ಲಡ್ ಕಾಲ್ ಜೆಸಿಸ್ ಎಂಬ ಕಾರ್ಯಕ್ರಮ ಇದ್ದು , ದೇಶದಲ್ಲಿ ಎಲ್ಲೆ ರಕ್ತದ ಅವಶ್ಯಕತೆ ಇದ್ದರೂ ನಮ್ಮ ಜೆಸಿಐ ಭಾರತದ ಸಂಸ್ತೆಯಿಂದ ರಕ್ತ ದಾನಿಗಳು ಸಿಗುತ್ತರೆ ಎಂದು ನವೀನ್ ತಲಾರಿ ತಿಳಿಸಿದರು.

ಸರ್ಕಾರಿ ಶಾಲಾ ಮಕ್ಕಳಿಗೆ ರಕ್ತದ ಗುಂಪಿನ ಪರಿಕ್ಷೆ ಮಾಡಿ, ಯುವಕರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಜೆಸಿ ಅರ್ಚನಾ ಮೂರ್ತಿ , ಉದ್ಘಾಟನೆ ಡಾಕ್ಟರ ಶೋಭಾ ಗಿರೀಶ್ ಜೆಪಿ ಅರಾಧನ ಆಸ್ಪತ್ರೆ, ಕಾರ್ಯಕ್ರಮ ನಿರ್ದೇಶಕರಾಗಿ ಜೆಸಿ ವಿದ್ಯಾಶ್ರೀ, ಜೆಸಿ ಅಶ್ವಿನಿ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಜೆಸಿ ನವೀನ್ ತಲಾರಿ, ಜೆಸಿ ಆಕಿಫ್, ಬ್ಲಡ್ ಬ್ಯಾಂಕ್ ನ ಉಲ್ಲಾಸ್, ಪದಾಧಿಕಾರಿಗಳು , ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...