State Department of Women and Child Welfare ಕರ್ನಾಟಕ ಸರ್ಕಾರದ “ ಗೃಹಲಕ್ಷ್ಮೀ ” ಯೋಜನೆಯ ಕುರಿತು ಬೆಂಗಳೂರಿನಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪತ್ರಿಕಾಗೋಷ್ಠಿ ನಡೆಸಿದರು.
ಗೃಹಲಕ್ಷ್ಮೀ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಬಿಪಿಎಲ್/ಎಪಿಎಲ್/ಅಂತ್ಯೋದಯ ಕಾರ್ಡ್ ನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ, 2,000/- ಗಳನ್ನು DBT ಮೂಲಕ ನೀಡುವ ಯೋಜನೆಯಾಗಿರುತ್ತದೆ ಎಂದರು.
State Department of Women and Child Welfare ಕುಟುಂಬದ ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ಸಮಗ್ರ ಅಭಿವೃದ್ಧಿಯನ್ನು ಖಚಿತ ಪಡಿಸಬಹುದಾಗಿರುತ್ತದೆ ಹಾಗೂ ಕುಟುಂಬದ ಅಭಿವೃದ್ಧಿ ಸಮಾಜದ ಅಭಿವೃದ್ಧಿಗೆ ಬುನಾದಿಯಾಗಿರುತ್ತದೆ. ಆದ್ದರಿಂದ ಸದರಿ ಯೋಜನೆಯು ಮಹಿಳಾ ಸಬಲೀಕರ ಹಾಗೂ ಸ್ವಾಭಿಮಾನದ ಹೆಗ್ಗುರುತಾಗಲಿದೆ ಎಂದು ತಿಳಿಸಿದರು.
ಈ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ 2023-24 ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲು ಸರ್ಕಾರವು ಹರ್ಷಿಸುತ್ತಿದೆ ಎಂದರು