Wednesday, October 2, 2024
Wednesday, October 2, 2024

KEA Karnataka ಸಿಇಟಿ 2.03 ಲಕ್ಷ ವಿದ್ಯಾರ್ಥಿಗಳಿಗೆ ಬಿ.ಇ.ಗೆ ಅರ್ಹತೆ

Date:

KEA Karnataka ಎಂಜಿನಿಯರಿಂಗ್ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಡೆಸಿದ 2023ನೇ ಸಾಲಿನ ಸಿಇಟಿ ಫಲಿತಾಂಶ ಹೊರಬಿದ್ದಿದ್ದು, 2,03,381 ವಿದ್ಯಾರ್ಥಿಗಳು ಬಿ.ಇ. ವ್ಯಾಸಂಗಕ್ಕೆ ಅರ್ಹತೆ ಗಳಿಸಿಕೊಂಡಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ತಿಳಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಸಿಇಟಿ ಫಲಿತಾಂಶದ ವಿವರಗಳನ್ನು ನೀಡಿದರು.

ಮೇ 20 ಮತ್ತು 21ರಂದು ರಾಜ್ಯದ 592 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಸಲಾಗಿತ್ತು. 1,14,565 ಬಾಲಕರು ಮತ್ತು 1,29,780 ಬಾಲಕಿಯರು ಸೇರಿದಂತೆ ಒಟ್ಟು 2,44,345 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.

KEA Karnataka ಬಿ.ಎಸ್ಸಿ (ಕೃಷಿ) ಕೋರ್ಸಿಗೆ 1,64,187, ಪಶುಸಂಗೋಪನಾ ವಿಜ್ಞಾನಕ್ಕೆ 1,66,756, ಯೋಗ ಮತ್ತು ನ್ಯಾಚುರೋಪತಿಗೆ 1,66,746, ಬಿ.ಫಾರ್ಮಾಗೆ 2,06,191 ಮತ್ತು ಫಾರ್ಮಾ.ಡಿ ಕೋರ್ಸಿಗೆ 2,06,340 ಅಭ್ಯರ್ಥಿಗಳು ಅರ್ಹತೆ ಸಂಪಾದಿಸಿಕೊಂಡಿದ್ದಾರೆ. ಈ ವರ್ಷದಿಂದ ಬಿ.ಎಸ್ಸಿ (ನರ್ಸಿಂಗ್‌) ಕೋರ್ಸಿಗೂ ಸಿಇಟಿ ಪರೀಕ್ಷೆ ನಡೆಸಲಾಗುತ್ತಿದ್ದು, ಇದಕ್ಕೆ 1,66,808 ಮಂದಿ ನಿಗದಿತ ಅರ್ಹತೆ ಗಳಿಸಿಕೊಂಡಿದ್ದಾರೆ ಎಂದು ಸಚಿವರು ವಿವರಿಸಿದರು.

ಫಲಿತಾಂಶವು ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ವಿಷಯವಾರು ಅಂಕಗಳ ವಿವರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಯಾವುದಾದರೂ ಅಭ್ಯರ್ಥಿಗಳ ರ್‍ಯಾಂಕ್‌ ತಡೆಹಿಡಿಯಲ್ಪಟ್ಟಿದ್ದರೆ, ಅಂಥವರು ತಮ್ಮ ಅರ್ಹತಾ ಪರೀಕ್ಷೆಯ ಅಂಕಪಟ್ಟಿಯ ಪ್ರತಿಯನ್ನು keauthority-ka@nic.in ಗೆ ಇ-ಮೇಲ್‌ ಮಾಡಿ ಅಥವಾ ಪ್ರಾಧಿಕಾರಕ್ಕೆ ಖುದ್ದಾಗಿ ಸಲ್ಲಿಸಿ, ರ್‍ಯಾಂಕಿಂಗ್ ಪಡೆದುಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಮಿಕ್ಕಂತೆ 2023ರ ಯು.ಜಿ.ನೀಟ್‌ ಪರೀಕ್ಷೆಯ ಫಲಿತಾಂಶ ಬಂದ ಬಳಿಕ, ಅಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ ಮತ್ತು ಹೋಮಿಯೋಪತಿ ಕೋರ್ಸುಗಳ ಪ್ರವೇಶಕ್ಕೆ ಅಭ್ಯರ್ಥಿಗಳನ್ನು ಅರ್ಹತೆಗೆ ಅನುಗುಣವಾಗಿ ಪರಿಗಣಿಸಲಾಗುವುದು. ಹಾಗೆಯೇ, ಈ ವರ್ಷದ ‘ನಾಟಾ’ ಅಂಕಗಳ ಆಧಾರದ ಮೇಲೆ ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕೆ ರ್‍ಯಾಂಕನ್ನು ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದರು.

ದಾಖಲೆಗಳ ಆನ್ ಲೈನ್ ಪರಿಶೀಲನೆ ನಂತರ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.

ವಿಘ್ನೇಶ್, ಭೈರೇಶ್‌, ಪ್ರತೀಕ್ಷಾ, ಮಾಳವಿಕಾ ಪ್ರಥಮ(ಬಾಕ್ಸ್‌)

ಸಿಇಟಿ ಬರೆದ ಅಭ್ಯರ್ಥಿಗಳಲ್ಲಿ ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಶ್ರೀ ಕುಮಾರನ್ಸ್‌ ಚಿಲ್ಡ್ರನ್ಸ್‌ ಹೋಮ್‌ ಕಾಲೇಜಿನ ವಿದ್ಯಾರ್ಥಿ ವಿಘ್ನೇಶ್‌ ನಟರಾಜ್‌ಕುಮಾರ್‍‌ (ಶೇ.97.899), ಬಿ.ಎಸ್ಸಿ (ಕೃಷಿ) ವಿಭಾಗದಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಪಿಯು ಕಾಲೇಜಿನ ಎಸ್.ಎಚ್‌. ಭೈರೇಶ್‌ (ಶೇ 96.75), ನ್ಯಾಚುರೋಪತಿ ಮತ್ತು ಯೋಗವಿಜ್ಞಾನ ವಿಭಾಗದಲ್ಲಿ ಶ್ರೀ ಕುಮಾರನ್‌ ಚಿಲ್ಡ್ರನ್ಸ್‌ ಹೋಂ ಸಂಯುಕ್ತ ಪಿಯು ಕಾಲೇಜಿನ ಕೆ.ಪ್ರತೀಕ್ಷಾ (ಶೇ 98.611) ಮತ್ತು ಬಿ.ಎಸ್ಸಿ (ವೆಟರ್ನರಿ) ವಿಭಾಗದಲ್ಲಿ ಬೆಂಗಳೂರಿನ ಮಹೇಶ್‌ ಪಿಯು ಕಾಲೇಜಿನ ಮಾಳವಿಕಾ ಕಪೂರ್‍‌ (ಶೇ 97.222) ಪ್ರಥಮ ಸ್ಥಾನದ ಶ್ರೇಯಸ್ಸನ್ನು ಪಡೆದುಕೊಂಡಿದ್ದಾರೆ.

ಶುಲ್ಕ ನಿಗದಿಯಲ್ಲಿ ಗೊಂದಲವಿಲ್ಲ (ಬಾಕ್ಸ್)
ಹಿಂದಿನ ಸರ್ಕಾರವೇ ಈ ವರ್ಷದ ಎಂಜಿನಿಯರಿಂಗ್ ಕೋರ್ಸುಗಳಿಗೆ ಶೇ 10ರಷ್ಟು ಶುಲ್ಕ ಹೆಚ್ಚಳ ಮಾಡಿತ್ತು. ಅದನ್ನು ನಿಯಮಗಳ ಪ್ರಕಾರ ಮಾಡಿದ್ದಾರೆ ಎನ್ನುವುದು ದಾಖಲೆಗಳನ್ನು ಪರಿಶೀಲಿಸಿದ ನಂತರ ಗೊತ್ತಾಗಿದೆ. ಹೀಗಾಗಿ ಈ ವಿಷಯದಲ್ಲಿ ಯಾವುದೇ‌ ಗೊಂದಲ ಇಲ್ಲ. ಇದೇ ವ್ಯವಸ್ಥೆ ಈ ವರ್ಷವೂ ಮುಂದುವರಿಯುತ್ತದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಬಂದ ನಂತರ ಅವರಿಗೂ ರಾಂಕ್ ನೀಡಲಾಗುವುದು ಎಂದರು.

ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

ಬಾಕ್ಸ್ -1
1.11 ಲಕ್ಷ ಎಂಜಿನಿಯರಿಂಗ್ ಸೀಟು ಲಭ್ಯ
ರಾಜ್ಯದಲ್ಲಿ ‌ಈ ಬಾರಿ ಒಟ್ಟು 1.11 ಲಕ್ಷ ಎಂಜಿನಿಯರಿಂಗ್ ಸೀಟುಗಳು ಲಭ್ಯವಿದ್ದು, ಇದರಲ್ಲಿ 53,248 ಸೀಟುಗಳನ್ನು ಸರ್ಕಾರಿ ಕೋಟಾದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಸಚಿವ ಡಾ. ಸುಧಾಕರ ತಿಳಿಸಿದರು.

ಇದಲ್ಲದೆ, ಕಾಮೆಡ್-ಕೆ ಮೂಲಕ 25,171 ಸೀಟು, ಮ್ಯಾನೇಜ್ಮೆಂಟ್ ಕೋಟಾದಡಿ 33,463 ಎಂಜಿನಿಯರಿಂಗ್ ಸೀಟುಗಳು ಲಭ್ಯವಿವೆ ಎಂದು ಅವರು ವಿವರಿಸಿದರು.

ಬಾಕ್ಸ್…2
ಅಂಕ ದಾಖಲಿಸಲು ಜೂನ್ 17 ಕೊನೆ ದಿನ
ಕಳೆದ ಸಾಲಿನ ಅಥವಾ ಅದರ ಹಿಂದಿನ ವರ್ಷಗಳಲ್ಲಿ ದ್ವಿತೀಯ ಪಿಯುಸಿ ಬರೆದ ವಿದ್ಯಾರ್ಥಿಗಳ ಹಾಗೂ ಸಿಬಿಎಸ್ಇ, ಐಸಿಎಸ್ಇ ಬೋರ್ಡ್ ಪರೀಕ್ಷೆ ಬರೆದ ಅಭ್ಯರ್ಥಿಗಳ ಸಿಇಟಿ ‌ರಾಂಕ್ ಪ್ರಕಟಣೆ ಆಗದಿದ್ದಲ್ಲಿ ಪ್ರಾಧಿಕಾರದ ಈ ಲಿಂಕ್ ನಲ್ಲಿ https://cetonline.Karnataka.gov.in/marksentry2023/forms/login.aspx ಭೌತ ವಿಜ್ಞಾನ, ಗಣಿತ, ರಸಾಯನ ವಿಜ್ಞಾನ, ಜೀವ ವಿಜ್ಞಾನ ಹಾಗೂ ಇಂಗ್ಲಿಷ್ ಭಾಷೆಯ ಅಂಕಗಳನ್ನು ನಮೂದಿಸಲು ಅವಕಾಶ ನೀಡಲಾಗಿದೆ. ಇದು ಕೊನೆಯ ಅವಕಾಶವಾಗಿದ್ದು ಇದೇ 17ರ ಸಂಜೆ 5 ಗಂಟೆಯವರೆಗೆ ಅಂಕ ದಾಖಲಿಸಲು ಅನುಮತಿ‌ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...