National Trade Union Congress ಶಿವಮೊಗ್ಗದ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಲಾಯಿತು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಿಕ್ಕುತೋಚದಂತಾಗಿರುವ ಬಿಜೆಪಿ ಕಾರ್ಯಕರ್ತರು ಸರ್ಕಾರದ ಆಸ್ತಿ ನಾಶಗೊಳಿಸುವ ಹೀನಕೃತ್ಯಕ್ಕೆ ಕೈ ಹಾಕಿರುವುದು ಶೋಭೆ ತರುವಂತದ್ದಲ್ಲ. ಸರ್ಕಾರದ ಆಸ್ತಿ ರಕ್ಷಿಸಬೇಕಾದ ಶಿವಮೊಗ್ಗ ನಗರದ ಶಾಸಕರೇ ತಮ್ಮ ಉದ್ವೇಗದ ಹೇಳಿಕೆಗಳಿಂದ ಕಾರ್ಯಕರ್ತರನ್ನು ಸರ್ಕಾರದ ಆಸ್ತಿ ನಾಶಕ್ಕೆ ಪ್ರಚೋಧಿಸಿದ್ದಾರೆ.
ಜನರ ತೆರಿಗೆಯ ಹಣದಿಂದ ಸರ್ಕಾರಿ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಸರ್ಕಾರಿ ಆಸ್ತಿ-ಪಾಸ್ತಿಗಳನ್ನು ಹಾಳು ಮಾಡುವುದು ಶಿಕ್ಷಾರ್ಹ ಅಪರಾಧ. ಹಾಗಾಗಿ ಪ್ರತಿಭಟನೆಯ ನೆಪದಲ್ಲಿ ಸರ್ಕಾರಿ ಆಸ್ತಿ ನಾಶ ಮಾಡಿರುವ ಪ್ರತಿಭಟನಕಾರರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಇನ್ನು ಪ್ರತಿಭಟನೆಯ ನೇತೃತ್ವ ವಹಿಸಿದ ನಗರ ಶಾಸಕರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕು.
National Trade Union Congress ಇನ್ನೂ ಕಾಂಗ್ರೆಸ್ ಸರ್ಕಾರ ಬಂದ ನಂತರ ಯಾವುದೇ ವಿದ್ಯುತ್ ದರ ಹೆಚ್ಚಳ ಮಾಡಿಲ್ಲ. ದರ ಹೆಚ್ಚಳವನ್ನು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ಮಾಡಲಾಗಿದೆ. ಆದರೆ ಬಿಜೆಪಿಯು ಜನರಿಗೆ ತಪ್ಪು ಮಾಹಿತಿ ನೀಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರನ್ನು ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿದೆ. ಇದಕ್ಕೆ ಮೆಸ್ಕಾಂ ಅಧಿಕಾರಿಗಳು ಅವಕಾಶ ಮಾಡಿಕೊಡಬಾರದು. ಇನ್ನೂ ಜನರಿಗೆ ತಪ್ಪು ಸಂದೇಶ ರವಾನೆ ಮಾಡುತ್ತಿರುವವರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಬೇಕು.
ಶಿವಮೊಗ್ಗ ನಗರದ ಶಾಂತಿ ಕದಡುವವರ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಡಬೇಕು. ತಪ್ಪಿತಸ್ಥರು ಯಾರೇ ಆದರೂ ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.