Thursday, March 19, 2026
Thursday, March 19, 2026

Department Of Women and Child welfare ಬಿಸಿಯೂಟ ತಯಾರಕರ ವೇತನ ಹೆಚ್ಚಿಸಲು ಒತ್ತಾಯ

Date:

Department Of Women and Child welfare ಮುಂದಿನ ಜುಲೈ ತಿಂಗಳಿನಲ್ಲಿ ರಾಜ್ಯ ಸರ್ಕಾರ ಮಂಡಿಸಲಿರುವ ಬಜೆಟ್‌ನಲ್ಲಿ ಬಿಸಿಯೂಟ ತಯಾಕರಿಗೆ ವೇತನವನ್ನು ಆರು ಸಾವಿರ ರೂ. ಹೆಚ್ಚಿಸುವಂತೆ ಒತ್ತಾಯಿಸಿ ಅಕ್ಷರ ದಾಸೋಹ, ಬಿಸಿಯೂಟ ಕಾರ್ಯಕರ್ತೆಯರ ಫೆಡರೇಷನ್ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಈ ಸಂಬಂಧ ಶಿರಸ್ತೇದಾರ್ ಮನು ಅವರ ಮೂಲಕ ಮುಖ್ಯಮಂತ್ರಿಗಳಿಗೆ ಗುರುವಾರ ಮನವಿ ಸಲ್ಲಿಸಿದ ಫೆಡರೇಷನ್ ಜಿಲ್ಲಾ ಸಮಿತಿ ಕಾರ್ಯಕರ್ತೆಯರು ಬಿಸಿಯೂಟ ತಯಾರಕರಿಗೆ ವೇತನವನ್ನು ಹೆಚ್ಚಿಸುವ ಮೂಲಕ ಜೀವನಕ್ಕೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಫೆಡರೇಷನ್ ಜಿಲ್ಲಾಧ್ಯಕ್ಷ ರಘು ಮಾತನಾಡಿ ರಾಜ್ಯ ಮಧ್ಯಾಹ್ನ ಬಿಸಿಯೂಟ ಉಪ ಹಾರ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ ಇರುವ ಶಾಲೆಗಳಲ್ಲಿ ಅಡಿಗೆ ಕೆಲಸ ನಿರ್ವಹಿಸುತ್ತಿರುವ ಬಿಸಿಯೂಟ ತಯಾರಕರಿಗೆ 2023 ಜುಲೈ ತಿಂಗಳಿನಲ್ಲಿ ಮಂಡಿಸಲಿರುವ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಬಿಸಿಯೂಟ ತಯಾರಕರ ವೇತನವನ್ನು ಹೆಚ್ಚಸಬೇಕೆಂದು ಒತ್ತಾಯಿಸಿದರು.

Department Of Women and Child welfare ರಾಜ್ಯದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಎಐಟಿಯುಸಿ ನಾಯಕರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕ ಗಾಂಧಿಯವರು ಬೆಳಗಾವಿಯಲ್ಲಿ ಚರ್ಚಿಸಿ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಅಧಿಕಾರಕ್ಕೆ ತಂದರೆ ಸರ್ಕಾರವು 6ನೇ ಗ್ಯಾರಂಟಿಯಾಗಿ ಬಿಸಿಯೂಟ ತಯಾರಕರಿಗೆ ಹೀಗಿರುವ ವೇತನವನ್ನು ಬದಲಾಗಿ 06 ಸಾವಿರ ಹೆಚ್ಚಿಸಲಾಗುವುದು ಪ್ರಚಾರದ ವೇದಿಕೆಯಲ್ಲಿ ಘೋಷಿಸಿದ್ದರು ಎಂದರು.

ಆ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಹುಮತದೊಂದಿಗೆ ಅಧಿಕಾರ ವಹಿಸಿಕೊಂಡು ಪ್ರಣಾಳಿಕೆಯ ಲ್ಲಿ ಆರನೇ ಗ್ಯಾರಂಟಿಯಾಗಿ ಘೋಷಿಸಿದಂತೆ 2023ರ ಜುಲೈ ತಿಂಗಳಲ್ಲಿ ಸರ್ಕಾರವು ಮಂಡಿಸುವ ಬಜೆಟ್‌ನಲ್ಲಿ ಬಿಸಿಯೂಟ ತಯಾರಕರಿಗೆ ವೇತನವನ್ನು ಹೆಚ್ಚಳಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಫೆಡರೇಷನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್‌ಕುಮಾರ್, ತಾಲ್ಲೂಕು ಅಧ್ಯಕ್ಷೆ ಇಂದುಮತಿ, ಬೀರೂರು ಅಧ್ಯಕ್ಷೆ ಪುಷ್ಪಾವತಿ, ಕಡೂರು ಅಧ್ಯಕ್ಷೆ ಸ್ವಪ್ನ, ಅಜ್ಜಂಪುರ ಅಧ್ಯಕ್ಷೆ ಸುನಂದ, ಮೂಡಿಗೆರೆ ಅಧ್ಯಕ್ಷೆ ಮಮತ, ಸದಸ್ಯರುಗಳಾದ ಕುಸುಮ, ಶಬೀನಾ, ರುಕ್ಮಿಣ , ಭಾಗ್ಯ, ಜ್ಯೋತಿ, ವಿಜಯಮ್ಮ, ಕವಿತಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...