Saturday, November 23, 2024
Saturday, November 23, 2024

DC Shivamogga ವಿದ್ಯಾರ್ಥಿನಿಯ ಅಸಹಜ ಸಾವಿನ ಬಗ್ಗೆ ಮಾಹಿತಿ ಸಂಗ್ರಹಿಸಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

Date:

DC Shivamogga ಇತ್ತೀಚೆಗೆ ಸಾಗರ ತಾಲೂಕು ಕೇಂದ್ರದ ಖಾಸಗಿ ವಸತಿ ಶಾಲೆಯೊಂದರಲ್ಲಿ ಅಪ್ರಾಪ್ತ ಬಾಲಕಿಯ ಅಸಹಜ ಸಾವಿನ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಪದಾಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿ, ವಾಸ್ತವ ಸಂಗತಿಗಳ ಕುರಿತು ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.

ನಂತರ ಅವರು ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಸಂಬಂಧಿತ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಆಯೋಗದ ಸದಸ್ಯ ವೆಂಕಟೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ನಡೆಯುವ ಇಂತಹ ಘಟನೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿ, ಸಕಾಲದಲ್ಲಿ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ ಅವರು, ಘಟನೆಗೆ ಸಂಬAಧಿಸಿದಂತೆ ಈವರೆಗೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು.

ಪ್ರಸ್ತುತ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಸುರಕ್ಷತೆ ಹಾಗೂ ಭವಿಷ್ಯದ ದೃಷ್ಠಿಯಿಂದ ಮಕ್ಕಳ ಪೋಷಕರ ಅನುಮತಿ ಪಡೆದು, ಸಮೀಪದ ಸರ್ಕಾರಿ ಹಾಸ್ಟೆಲ್‌ಗಳಲ್ಲಿ ತಂಗಿದ್ದು, ಶೈಕ್ಷಣ ಕ ಚಟುವಟಿಕೆಗಳನ್ನು ಮುಂದುವರೆಸಲು ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಸದರಿ ಶಿಕ್ಷಣ ಸಂಸ್ಥೆಯಲ್ಲಿ ನೆರೆ ರಾಜ್ಯದ 02 ವಿದ್ಯಾರ್ಥಿಗಳಿದ್ದು, ಅವರ ಸುರಕ್ಷತೆ ಮತ್ತು ಶಿಕ್ಷಣಕ್ಕೆ ಗಮನಹರಿಸಬೇಕು. ಅಗತ್ಯವಿದ್ದಲ್ಲಿ ಮಕ್ಕಳನ್ನು ತಮ್ಮ ಹುಟ್ಟೂರಿಗೆ ಕಳುಹಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

DC Shivamogga ಜಿಲ್ಲೆಯಲ್ಲಿ ನಡೆಸುತ್ತಿರುವ ಖಾಸಗಿ ವಸತಿ ಶಿಕ್ಷಣ ಸಂಸ್ಥೆಗಳ ಆಡಳಿತ ಪ್ರತಿನಿಧಿಗಳೊಂದಿಗೆ ಈ ರೀತಿಯ ಅಹಿತಕರ ಘಟನೆಗಳಾಗದಂತೆ ಕ್ರಮ ವಹಿಸಲು ಶೀಘ್ರದಲ್ಲಿ ದಿನಾಂಕ ನಿಗಧಿಪಡಿಸಿ ಸಭೆ ಆಯೋಜಿಸುವಂತೆ ಸಲಹೆ ನೀಡಿದ ಅವರು, ಪಂಚಾಯಿತಿ ಮಟ್ಟದಲ್ಲಿ ಮಕ್ಕಳ ರಕ್ಷಣಾ ಸಮಿತಿಗಳನ್ನು ಮಕ್ಕಳ ರಕ್ಷಣಾ ಸಮಿತಿಗಳನ್ನು ರಚಿಸಿ, ಮಕ್ಕಳ ರಕ್ಷಣಗೆ ಕ್ರಮ ವಹಿಸುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.

ಅಲ್ಲಿನ ಸಿಬ್ಬಂಧಿಗಳಿಗೆ ಸೂಕ್ತ ತರಬೇತಿ ನೀಡಬೇಕು. ಶಿಕ್ಷಕರಿಗೆ ಫೋಕ್ಸೊ ಮತ್ತು ಜೆ.ಜೆ. ಆ್ಯಕ್ಟ್ನ ಕುರಿತು ಮಾಹಿತಿ ಒದಗಿಸುವ ಅಗತ್ಯವಿದೆ ಎಂದವರು ನುಡಿದರು.

ಸದರಿ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಲ್ಲಾ ಮಕ್ಕಳ ಸ್ಥಿತಿಗತಿಗಳ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದ ಅವರು, ಈ ವರದಿಯ ಆಧಾರದ ಮೇಲೆ ಮಕ್ಕಳಿಗೆ ಸರ್ಕಾರದ ಸೌಲಭ್ಯಗಳನ್ನು ದೊರಕಿಸಲು ಸಾಧ್ಯವಾಗಲಿದೆ. ಈ ಘಟನೆಯ ವಾಸ್ತವಾಂಶ ಅರಿತು ಕ್ರಮ ಕೈಗೊಳ್ಳಲು ಕೂಡಲೆ ತನಿಖಾ ಸಮಿತಿ ರಚಿಸುವಂತೆ ಅವರು ಸೂಚಿಸಿದರು.

ಘಟನೆಯ ನಂತರ ಸದರಿ ಶಾಲೆಗೆ ನೀಡಲಾಗಿದ್ದ ಮಾನ್ಯತೆಯನ್ನು ರದ್ದುಪಡಿಸಲಾಗಿದೆ. ಅಲ್ಲದೇ ಈ ಘಟನೆಗೆ ಮುನ್ನವೇ ಜಿಲ್ಲೆಯಲ್ಲಿನ ಖಾಸಗಿ ವಸತಿ ಶಿಕ್ಷಣ ಸಂಸ್ಥೆಗಳ ಕುರಿತು ಗಮನಹರಿಸಲು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅವರಿಂದ ಕಾಲಕಾಲಕ್ಕೆ ಮಾಹಿತಿ ಪಡೆಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣ ಅವರು ಹೇಳಿದರು.

ಪ್ರಸ್ತುತ ಮೃತ ವಿದ್ಯಾರ್ಥಿನಿಯ ಪೋಷಕರಿಗೆ ಪರಿಹಾರ ಧನ ವಿತರಿಸಲಾಗುವುದು ಎಂದ ಅವರು, ಖಾಸಗಿ ಶಿಕ್ಷಣ ಸಂಸ್ಥೆಗಳು ಜೆ.ಜೆ.ಆ್ಯಕ್ಟ್ನಡಿಯಲ್ಲಿ ನೋಂದಾಯಿಸಿಕೊಳ್ಳಲು ಕಾನೂನನ್ನು ರೂಪಿಸಿ, ಅನುಷ್ಠಾನಕ್ಕೆ ತರುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿಗಳು ಅಭಿಪ್ರಾಯಪಟ್ಟರು.

ತಂಡದ ಸದಸ್ಯರು ಘಟನೆ ನಡೆದ ವಸತಿ ಶಾಲೆಗೆ ಭೇಟಿ ಅಲ್ಲಿನ ಸ್ಥಿತಿಗತಿಗಳನ್ನು ಖುದ್ದು ಪರಿಶೀಲಿಸಿ, ಅಲ್ಲಿನ ನ್ಯೂನತೆಗಳನ್ನು ಗಮನಿಸಿದ್ದಾರೆ.

ವಿಶೇಷವಾಗಿ ಮೂಲಭೂತ ಸೌಕರ್ಯಗಳ ಕೊರತೆ, ವಸತಿ ಸಮಸ್ಯೆ, ಕಲಿಕಾ ಸಾಮಗ್ರಿಗಳ ಕೊರತೆ, ಸುರಕ್ಷತಾ ಕ್ರಮಗಳಿಲ್ಲದಿರುವುದು, ದಿನಂಪೂರ್ತಿ ಕಾರ್ಯನಿರ್ವಹಿಸಲು ಮಹಿಳಾ ಸಿಬ್ಬಂಧಿಗಳಿಲ್ಲದಿರುವುದು ಸೇರಿದಂತೆ ಇಂತಹ ಅನೇಕ ವಿಷಯಗಳನ್ನು ಗಮನಿಸಿದೆ ಎಂದರು.

ಸಭೆಯಲ್ಲಿ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಶ್ರೀಮತಿ ಎಸ್.ಮಂಜು, ಡಾ|| ತಿಪ್ಪೇಸ್ವಾಮಿ ಕೆ.ಟಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ|| ನಾಗರಾeನಾಯ್ಕ್, ಡಾ|| ಮಲ್ಲಿಕಾರ್ಜುನ ಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪರಮೇಶ್ವರಪ್ಪ, ಸಮಾಜ ಕಲ್ಯಾಣಾಧಿಕಾರಿ ಶ್ರೀನಿವಾಸ್, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಶ್ರೀಮತಿ ಶೋಭಾ, ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷೆ ಶ್ರೀಮತಿ ರೇಖಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ...

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...