Friday, April 18, 2025
Friday, April 18, 2025

Department of Women and Child Development ಜಿಲ್ಲೆಯಲ್ಲಿನ ಬಾಲ್ಯ ವಿವಾಹ ಪ್ರಕರಣ ಶೀಘ್ರ ಪತ್ತೆ ಹಚ್ವಲು ಡೀಸಿ ಸೂಚನೆ

Date:

Department of Women and Child Development ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನ ಕೆಲವು ಗ್ರಾಮಗಳಲ್ಲಿ ಬಾಲ್ಯವಿವಾಹ ಪ್ರಕರಣಗಳು ಕಂಡುಬಂದಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಅದರ ನಿಯಂತ್ರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸೇರಿದಂತೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ಸಕಾಲಿಕ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಬಾಲ್ಯವಿವಾಹದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುವಂತೆ ಸೂಚಿಸಿದ ಅವರು, ಒಂದು ವಾರದೊಳಗಾಗಿ ಜಿಲ್ಲೆಯಲ್ಲಿ ದಾಖಲಾದ ಬಾಲ್ಯವಿವಾಹ ಪ್ರಕರಣಗಳ ಸಮಗ್ರ ಮಾಹಿತಿಯನ್ನು ನೀಡಬೇಕು. ಬಾಲ್ಯವಿವಾಹಗಳನ್ನು ಪ್ರೇರೇಪಿಸುವ ಹಾಗೂ ಭಾಗಿಯಾದವರೆಲ್ಲರ ವಿರುದ್ಧವೂ ಮೊಕದ್ದಮೆ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚನೆ ಮಾಡಿದರು.

Department of Women and Child Development ಶಿಕಾರಿಪುರ ತಾಲೂಕು ಕೇಂದ್ರದಲ್ಲಿ ಅಪೌಷ್ಟಿಕ ಮಕ್ಕಳ ಆರೈಕೆ ಕೇಂದ್ರ ಸ್ಥಗಿತಗೊಂಡಿದ್ದು, ಅದನ್ನು ಪುನರಾರಂಭಿಸಿ, ಅಗತ್ಯ ಮಕ್ಕಳಿಗೆ ಸೌಲಭ್ಯ ಒದಗಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದ ಅವರು, ಅಪೌಷ್ಠಿಕ ಮಕ್ಕಳ ಸಕಾಲಿಕ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ತಾಲೂಕು ಆರೋಗ್ಯ ಕೇಂದ್ರದಲ್ಲಿ ಕನಿಷ್ಠ 05 ಹಾಸಿಗೆಗಳನ್ನು ಕಾಯ್ದಿರಿಸುವಂತೆ ಅವರು ಸೂಚಿಸಿದರು.

ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಮಹಿಳಾ ನಿಲಯದಲ್ಲಿನ ನಿರ್ಗತಿಕ ಮಹಿಳೆಯರ ಪೋಷಣೆ ಹಾಗೂ ಪುನರ್ವಸತಿ ಪಡೆಯುತ್ತಿರುವ ಮಾನಸಿಕ ಅಸ್ವಸ್ಥ ಮಹಿಳೆಯರ ಆರೋಗ್ಯ ತಪಾಸಣೆಗಾಗಿ, ಹಾಗೂ ಜಿಲ್ಲೆಯ ನಿರಾಶ್ರಿತ ಮಹಿಳೆಯರ ವಸತಿ ಕೇಂದ್ರಗಳಿಗೆ ಜಿಲ್ಲೆಯ ವೈದ್ಯಕೀಯ ಅಧೀಕ್ಷಕರು ಸೇರಿದಂತೆ ಮಾನಸಿಕ ವೈದ್ಯರು ಕಾಲಕಾಲಕ್ಕೆ ಭೇಟಿ ನೀಡಿ ವರದಿ ನೀಡುವಂತೆ ಸೂಚಿಸಿದರು.

ಮಹಿಳೆಯರಲ್ಲಿ ವಿಶೇಷವಾಗಿ ಗರ್ಭಿಣಿ ಮತ್ತು ಬಾಣಂತಿಯರಲ್ಲಿ ಕಂಡುಬರುವ ಅಪೌಷ್ಠಿಕತೆ ಮತ್ತು ರಕ್ತಹೀನತೆಯನ್ನು ತಡೆಗಟ್ಟುವ ಉದ್ದೇಶದಿಂದ ಗರ್ಭಿಣಿ ಮತ್ತು ಬಾಣಂತಿಯರಿಗೆ ಆಂಶಿಕ ಪರಿಹಾರ ಒದಗಿಸಲು ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಮಾತೃವಂದನಾ ಯೋಜನೆಯ ವ್ಯವಸ್ಥಿತ ಅನುಷ್ಠಾನಕ್ಕೆ ಅಧಿಕಾರಿಗಳು ಗಮನಹರಿಸುವಂತೆ ಸೂಚಿಸಿದ ಅವರು, ಸರ್ಕಾರೇತರ ಕಟ್ಟಡಗಳಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಖಾಯಂ ಕಟ್ಟಡ ನಿರ್ಮಾಣಕ್ಕೆ ಸಕಾಲದಲ್ಲಿ ಸರ್ಕಾರದಿಂದ ನಿರೀಕ್ಷಿತ ಅನುದಾನ ಬಿಡುಗಡೆಗೊಳ್ಳದಿರುವುದರಿಂದ ಅಡಚಣೆ ಉಂಟಾಗಿದೆ. ಹಣ ಬಿಡುಗಡೆಯಾಗುತ್ತಿದ್ದಂತೆ ಕಟ್ಟಡ ನಿರ್ಮಾಣ ಕಾರ್ಯಗಳಿಗೆ ಕ್ರಮ ವಹಿಸಲಾಗುವುದು ಎಂದರು.

ನಗರದ ನೂರಡಿ ರಸ್ತೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆಗಟ್ಟಲು ಹಾಗೂ ವಾಣಿಜ್ಯ ಲೈಂಗಿಕ ದುರುಪಯೋಗಕ್ಕೆ ಒಳಪಟ್ಟವರನ್ನು ರಕ್ಷಿಸಲು, ಪುನರ್ವಸತಿ ಕಲ್ಪಿಸಲು ಮತ್ತು ಕುಟುಂಬದವರೊಂದಿಗೆ ಪುನರ್ ವಿಲೀನಗೊಳಿಸಲು ಅನುಷ್ಠಾನಗೊಂಡಿರುವ ಉಜ್ವಲ ಯೋಜನೆ ನಡೆಯುತ್ತಿರುವ ಕಟ್ಟಡಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸುವುದಾಗಿ ಅವರು ತಿಳಿಸಿದ ಅವರು ವರದಕ್ಷಿಣೆ ನಿಷೇಧ ಕಾಯ್ದೆಯಡಿ ನೋಂದಾಯಿಸಲ್ಪಟ್ಟ ಪ್ರಕರಣ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಕೌಟುಂಬಿಕ ದೌರ್ಜನ್ಯದಡಿ ದಾಖಲಾದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಪೊಲೀಸ್ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು.

ಬಾಲನ್ಯಾಯ ಮಂಡಳಿಯಲ್ಲಿ ದಾಖಲಾದ ತ್ವರಿತವಾಗಿ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಕಾನೂನು ಸಂಘರ್ಷಕ್ಕೊಳಗಾದ ಹಾಗೂ ಸಾಕ್ಷಿದಾರರು ಪ್ರಕರಣದ ದಿನಾಂಕಗಳಂದು ಗೈರುಹಾಜರಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಸಕಾಲದಲ್ಲಿ ಸಾಕ್ಷö್ಯ ನೀಡದ ವ್ಯಕ್ತಿಗಳ ಕರೆತರುವಲ್ಲಿ ವಾರೆಂಟ್ ಜಾರಿಗೊಳಿಸಲು ಅವರು ಸಲಹೆ ನೀಡಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮಾಧಿಕಾರಿ ಮೆಗ್ಗಾನ್ ಆಸ್ಪತ್ರೆಯ ಅಧೀಕ್ಷಕ ಡಾ|| ಶ್ರೀಧರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ರಾಜೇಶ್ ಸುರಗೀಹಳ್ಳಿ, ಸಿಡಿಪಿಒ ಚಂದ್ರಪ್ಪ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....