Congress Karnataka ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಬಿಪಿಎಲ್ ಕುಟುಂಬದ ಪ್ರತೀ ಸದಸ್ಯರಿಗೂ ತಲಾ 10 ಕೆಜಿ ಅಕ್ಕಿ ವಿತರಿಸುವ ಅನ್ನಭಾಗ್ಯ ಯೋಜನೆಗೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿರುವ ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಜೂನ್ 20ರಂದು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ. ಈ ಸಂಬಂಧ ಕಾಂಗ್ರೆಸ್‌ನ ಜಿಲ್ಲಾ ಘಟಕಗಳಿಗೆ ಸೂಚನೆ ತಲುಪಿಸಲಾಗುತ್ತಿದೆ. ಸ್ಥಳೀಯ ಶಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರಕ್ಕೆ ಕನ್ನಡಿಗರ ದಿಟ್ಟ ಸಂದೇಶವನ್ನು ತಲುಪಿಸಬೇಕು.
Congress Karnataka 7 ಲಕ್ಷ ಟನ್ ಅಕ್ಕಿ ದಾಸ್ತಾನಿದೆ ಎಂದು ಹೇಳಿದ್ದ ಕೇಂದ್ರ ಬಿಜೆಪಿ ಸರ್ಕಾರ ಮರುದಿನವೇ ತನ್ನ ಮಾತು ಬದಲಿಸಿದೆ. ಈ ಮೂಲಕ ತಮಗೆ ಮತ ಹಾಕದ ಬಡ ಕನ್ನಡಿಗರ ಮೇಲೆ ಬಿಜೆಪಿ ಸರ್ಕಾರ ದ್ವೇಷ ಸಾಧಿಸುತ್ತಿದೆ. ತೆಲಂಗಾಣ, ಛತ್ತೀಸ್‌ಗಢ ಮೊದಲಾದ ರಾಜ್ಯಗಳೊಂದಿಗೆ ಈಗಾಗಲೇ ಮಾತುಕತೆ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷವು ಕೊಟ್ಟ ಮಾತಿನಂತೆ ನಡೆಯಲಿದೆ ಎಂದು
ಡಿ.ಕೆ.ಶಿವಕುಮಾರ್ ತಿಳಿಸಿದರು.
Congress Karnataka ಅಕ್ಕಿ ಸರಬರಾಜು ನಿರಾಕರಣೆ: ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಆಯೋಜನೆ- ಡಿ.ಕೆ.ಶಿವಕುಮಾರ್
Date: