Thursday, March 19, 2026
Thursday, March 19, 2026

SIIMS Shivamogga ಜೂನ್ 19 ರಿಂದ ಜಿಲ್ಲೆಯಲ್ಲಿ ಕುಷ್ಠರೋಗ ಪತ್ತೆ ಆಂದೋಲನ

Date:

SIIMS Shivamogga ಶಿವಮೊಗ್ಗ ಜಿಲ್ಲಾ ಕುಷ್ಠರೋಗ ನಿವಾರಣ ಕಾರ್ಯಕ್ರಮದಡಿ ಜೂನ್-19ರಿಂದ ಜುಲೈ-06ರವರೆಗೆ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಕಾರ್ಯಕ್ರಮದ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಿಮ್ಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿವಾರಣ ಕಾರ್ಯಕ್ರಮ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜೂನ್ 19 ರಂದು ಬೆಳಗ್ಗೆ 08:00ಕ್ಕೆ ನಗರದ ಶರಾವತಿ ನಗರ-2 ಚಾನಲ್ ಏರಿಯಾ, ಅಶೋಕ ಗ್ರ್ಯಾಂಡ್ ಹೋಟೆಲ್ ಹಿಂಭಾಗದ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕ್ರಮದ ಉದ್ಘಾಟನೆ ಸಮಾರಂಭವನ್ನು ಏರ್ಪಡಿಸಲಾಗಿದೆ.

ಈ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ರಾಜೇಶ್ ಸುರಗೀಹಳ್ಳೀಯವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಡಾ|| ಸೆಲ್ವಮಣ ಆರ್. ಉದ್ಘಾಟಿಸಲಿದ್ದಾರೆ.

SIIMS Shivamogga ಅತಿಥಿಗಳಾಗಿ ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಭಾಗವಹಿಸಲಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್ ಕುಮಾರ್, ವಾರ್ತಾಧಿಕಾರಿ ಆರ್. ಮಾರುತಿ, ಸಿಮ್ಸ್ ಜಿಲ್ಲಾ ಶಸ್ತçಚಿಕಿತ್ಸಕ ಡಾ|| ಸಿದ್ದನಗೌಡ ಪಾಟೀಲ್, ಮೆಗ್ಗಾನ್ ವೈದ್ಯಕೀಯ ಅಧೀಕ್ಷಕ ಡಾ|| ಶ್ರೀಧರ್ ಮುಂತಾದ ಅಧಿಕಾರಿ ವರ್ಗದವರು ಉಪಸ್ಥಿತರಿರಲಿದ್ದಾರೆ.

ಜೂನ್-19 ರಿಂದ ಜುಲೈ 06ರವರೆಗೆ ನಡೆಯುವ ಈ ಆಂದೋಲನದಲ್ಲಿ ಸಾರ್ವಜನಿಕರು ತಮ್ಮ ಮನೆಗಳಿಗೆ ಭೇಟಿ ನೀಡುವ ಆರೋಗ್ಯ ಸಹಾಯಕರು, ಆಶಾ ಮತ್ತು ಸ್ವಯಂ ಸೇವಕರಿಂದ ಪರೀಕ್ಷಿಸಿಕೊಂಡು ಸಹಕರಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಉಚಿತ ಸಹಾಯವಾಣ 104ಕ್ಕೆ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...