Thursday, March 19, 2026
Thursday, March 19, 2026

Department of Youth Empowerment and Sports ಯುವ ಸಬಲೀಕರಣ ಇಲಾಖೆಯಿಂದ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

Date:

Department of Youth Empowerment and Sports ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2022-23ನೇ ಸಾಲಿನ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ (06 ರಿಂದ 10ನೇ ತರಗತಿ) ವಾರ್ಷಿಕ ರೂ.10,000 ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡಲು ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಕಚೇರಿಯ ಅಧಿಕೃತ ಜಲತಾಣ – ಮೂಲಕ ಜು.31 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು 2022-23 ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ (06 ರಿಂದ 10ನೇ ತರಗತಿ) ಓದುತ್ತಿರಬೇಕು. ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು ಏ.01ರಿಂದ ಮಾ.31 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು.

Department of Youth Empowerment and Sports ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು. ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದವರು. ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ಕ್ರೀಡಾ ವಿದ್ಯಾರ್ಥಿ ವೇತನದ ಮೊತ್ತಕ್ಕೆ ಅರ್ಹರಿರುತ್ತಾರೆ.

ಆಸಕ್ತ ವಿದ್ಯಾರ್ಥಿಗಳು ಇಲಾಖೆಯ
ವೆಬ್‌ಸೈಟ್ ನಲ್ಲಿ ಜುಲೈ 31 ರೊಳಗಾಗಿ ಸಲ್ಲಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...