Tuesday, February 3, 2026
Tuesday, February 3, 2026

International Yoga Day ಶಿವಮೊಗ್ಗದಲ್ಲಿನ ಯೋಗ ಕೇಂದ್ರಗಳಿಂದ ಸೂಕ್ತ ಮಾರ್ಗದರ್ಶನ ಸಿಗುತ್ತಿದೆ- ಡಾ.ಸೆಲ್ವಮಣಿ

Date:

International Yoga Day ದೇಹ ಮತ್ತು ಮನಸ್ಸನ್ನು ಆರೋಗ್ಯವಾಗಿಟ್ಟುಕೊಂಡಾಗ ದಿನನಿತ್ಯದ ಕೆಲಸ-ಕಾರ್ಯಗಳನ್ನು ನಿರೀಕ್ಷೆಯಂತೆ ನಿರ್ವಹಿಸಲು, ಸದಾ ಲವಲವಿಕೆಯಿಂದಿರಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಯೋಗಭ್ಯಾಸವನ್ನು ನಿಯಮಿತವಾಗಿ ರೂಢಿಸಿಕೊಳ್ಳುವುದು ಎಂದು ಶ್ರೇಯಸ್ಕರ ಎಂದು ಜಿಲ್ಲಾಧಿಕಾರಿ ಡಾ|| ಆರ್. ಸೆಲ್ವಮಣಿ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಅಂತರರಾಷ್ಟ್ರಿಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ದಶಕದಿಂದೀಚೆಗೆ ಯೋಗದ ಮಹತ್ವದ ಜನರಿಗೆ ಅರಿವಾಗಿದ್ದು, ಹೆಚ್ಚಿನ ಜನ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಹೊಂದಿದ್ದು, ಯೋಗಾಭ್ಯಾಸದ ಕಡೆಗೆ ಒಲವು ಹೊಂದಿದ್ದಾರೆ. ಸರ್ಕಾರ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸಾರ್ವಜನಿಕರಲ್ಲಿ ಯೋಗದ ಕುರಿತು ಅರಿವು ಮೂಡಿಸುವಲ್ಲಿ ಸಕ್ರಿಯವಾಗಿವೆ.

ಅಲ್ಲದೇ ನಗರದ ಹಲವೆಡೆ ಯೋಗ ತರಬೇತಿ ಕೇಂದ್ರಗಳು ಮಾರ್ಗದರ್ಶನ ನೀಡುತ್ತಿದ್ದು, ಆರೋಗ್ಯವಂತ ಸಮಾಜ ನಿರ್ಮಿಸುವಲ್ಲಿ ಪ್ರಮುಖಪಾತ್ರ ವಹಿಸಿರುವುದು ಉತ್ತಮ ಬೆಳವಣ ಗೆಯಾಗಿದೆ ಎಂದವರು ನುಡಿದರು.

ವ್ಯಾಯಾಮದ ಮೂಲಕ ಶರೀರದ ಮಾಂಸ ಖಂಡಗಳನ್ನು ಪುಷ್ಟಿಗೊಳಿಸಿ ಶರೀರಕ್ಕೆ ಗಂಭೀರ ನೋಡ ಕೊಡಿಸಬಹುದು. ಆದರೆ, ಯೋಗಾಸನದ ಮೂಲಕ ಶರೀರ, ಮನಸ್ಸು ಮತ್ತು ನರ-ನಾಡಿಗಳನ್ನು ಸದಾ ಕ್ರಿಯಾಶೀಲವಾಗಿಡುವಲ್ಲಿ ಸಹಕಾರಿಯಾಗಿದೆ.

International Yoga Day ಮಾತ್ರವಲ್ಲ ದೇಹದಲ್ಲಿ ಮೆದುಳು, ಹೃದಯ, ಶ್ವಾಸಕೋಶ, ಪಿತ್ತಕೋಶ, ಕಿಡ್ನಿ ಮುಂತಾದವುಗಳು ಪರಿಪೂರ್ಣವಾಗಿ ಕಾರ್ಯನಿರ್ವಹಿಸುವಂತೆ ಮಾಡಲು ಯೋಗಾಭ್ಯಾಸ ಉತ್ತಮವಾದುದಾಗಿದೆ ಎಂದವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿವಯೋಗ ಯೋಗ ಕೇಂದ್ರದ ತರಬೇತುದಾರ ಗೋಪಾಲಕೃಷ್ಣ ಅವರು ಸರಳ, ಸುಲಭ ಹಾಗೂ ಎಲ್ಲರೂ ಕಲಿಯಬಹುದಾದ ಯೋಗಾಸನ ಮತ್ತು ಪ್ರಾಣಾಯಾಮಗಳ ಕುರಿತು ಮಾಹಿತಿಯುಕ್ತ ಪ್ರಾತ್ಯಕ್ಷಿತೆ ಮತ್ತು ತರಬೇತಿ ನೀಡಿದರು.

ಇದೇ ಸಂದರ್ಭದಲ್ಲಿ ಸಿದ್ಧಯೋಗ ಧ್ಯಾನ ಕೇಂದ್ರದ ಚಂದ್ರಶೇಖರ್ ಅವರು ಧ್ಯಾನ, ಅದರ ಮಹತ್ವ ಹಾಗೂ ಅನುಸರಣಾ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ನೆಹರೂ ಯುವ ಕೇಂದ್ರದ ಸಮನ್ವಯಾಧಿಕಾರಿ ಕೆ.ಟಿ.ಕೆ.ಉಲ್ಲಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಸೇರಿದಂತೆ ಸಹಸ್ರಾರು ಸಂಖ್ಯೆಯ ಯೋಗಪಟುಗಳು, ಕಲಿಕಾರ್ಥಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ-ಸಿಬ್ಬಂಧಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.





LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...