International Yoga Day ಇಂದಿನ ಒತ್ತಡದ ಜೀವನದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯ ಮುಖ್ಯ. ಯೋಗದಿಂದ ಆರೋಗ್ಯ ಸಾಧಿಸಬಹುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್ ಹೇಳಿದರು.
ಶಿವಮೊಗ್ಗದ ಬಿ.ಹೆಚ್. ರಸ್ತೆಯ ಸರ್ಕಾರಿ ಬಾಲಿಕಾ ಪದವಿಪೂರ್ವ ಕಾಲೇಜಿನಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ನಲ್ಮ್ ವಿಭಾಗ, ಮುತ್ತೋಟ್ ಫೈನಾನ್ಸ್, ನೇಸರ ಸೆಂಟರ್ ಫಾರ್ ರೂರಲ್ ಅಡ್ವಾನ್ಸ್ಮೆಂಟ್ (ರಿ.), ಜೆಸಿಐ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮನುಷ್ಯನ ಆರೋಗ್ಯ ಚೆನ್ನಾಗಿದ್ದರೆ ಏನು ಬೇಕಾದರೂ ಮಾಡಬಹುದು. ನಮ್ಮ ಪೂರ್ವಜರು ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಅಗತ್ಯವಾಗಿದ್ದ ಯೋಗವನ್ನು ಪುರಾತನ ಕಾಲದಲ್ಲೇ ಕಂಡು ಹಿಡಿದಿದ್ದರು. ನಿರಂತರ ಯೋಗಾಭ್ಯಾಸದಿಂದ ಆರೋಗ್ಯವೃದ್ಧಿಯ ಜೊತೆಗೆ ಆಯಸ್ಸನ್ನೂ ಹೆಚ್ಚಿಸಿಕೊಳ್ಳಬಹುದು. ಪ್ರಧಾನಿ ನರೇಂದ್ರ ಮೋದಿಜಿಯವರ ಪ್ರಯತ್ನದಿಂದ ಇಂದು ವಿಶ್ವದಾದ್ಯಂತ ಯೋಗ ಪ್ರಸಿದ್ಧಿಯಾಗಿದೆ. ಇದು ೯ನೇ ಅಂತಾರಾಷ್ಟ್ರೀಯ ಯೋಗದಿನಾಚರಣೆಯಾಗಿದೆ. ವಿಶ್ವಕ್ಕೆ ಭಾರತೀಯ ಸಂಸ್ಕೃತಿಯ ಕೊಡುಗೆ ಯೋಗವಾಗಿದೆ ಎಂದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ ಮಾತನಾಡಿ, ಯೋಗ ದಿನಾಚರಣೆಯಲ್ಲಿ ಬಾಲಿಕಾ ಪ.ಪೂ. ಕಾಲೇಜಿನಲ್ಲಿ ಆಯೋಜಿಸಿರುವುದು ಸ್ವಾಗತಾರ್ಹ.
International Yoga Day ಸಂಘ-ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಯೋಗದ ಮಹತ್ವವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಸಾರುತ್ತಿರುವುದು ಹೆಮ್ಮೆಯ ವಿಷಯ ಎಂದರು.
ಪಾಲಿಕೆಯ ನಲ್ಮ್ ಅಧಿಕಾರಿ ಅನುಪಮ ಮಾತನಾಡಿ, ಮಹಿಳೆಯರ ಆರೋಗ್ಯ ರಕ್ಷಣೆಯಲ್ಲಿ ಯೋಗದ ಪ್ರಾಮುಖ್ಯತೆಯ ಬಗ್ಗೆ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಚಾರ್ಯ ಜಯಂತ್ ಮಾತನಾಡಿ, ಸಂಘ- ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಗ್ರಾಮೀಣ ಪ್ರದೇಶದ ಬಡ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಕಾಲೇಜಿಗೆ ಅನುಕೂಲವಾಗಲಿದೆ ಎಂದರು.
ಉಪಮೇಯರ್ ಲಕ್ಷ್ಮೀ ಶಂಕರನಾಯ್ಕ ಮಾತನಾಡಿದರು.
ಮುತ್ತೋಟ್ ಫೈನಾನ್ಸ್ನ ವ್ಯವಸ್ಥಾಪಕ ಪ್ರಸಾದ್, ನೇಸರ ಸೆಂಟರ್ ಫಾರ್ ರೂರಲ್ ಅಡ್ವಾನ್ಸ್ಮೆಂಟ್‌ನ ಕಾರ್ಯದರ್ಶಿ ಎಂ. ಮಂಜುನಾಥ್, ಜೆಸಿಐನ ಜೇಸಿ ಕಾರ್ಣಿಕ್ ಉಪಸ್ಥಿತರಿದ್ದರು.