Friday, April 25, 2025
Friday, April 25, 2025

Basaveshwar High School ಶಿಕ್ಷಣ ಸಂಸ್ಥೆಯ ಬೆಳವಣಿಗೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯ-ಶಾಸಕ ತಮ್ಮಯ್ಯ

Date:

Basaveshwar High School ವಿದ್ಯಾರ್ಥಿಗಳು ಬಾಲ್ಯದಿಂದಲೇ ಮುಂದಿನ ಬದುಕು ಯಾವ ರೀತಿಯಲ್ಲಿ ಸಾಗಬೇಕು ಎಂಬ ಗುರಿ ಹೊಂದಿದರೆ ಮಾತ್ರ ಭವಿಷ್ಯದ ಕಾಲಘಟ್ಟದಲ್ಲಿ ಉನ್ನತ ಸ್ಥಾನಕ್ಕೇರುವ ಮೂಲಕ ಯಶಸ್ವಿ ಜೀವನ ನಡೆಸಲು ಸಾಧ್ಯ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

ಚಿಕ್ಕಮಗಳೂರು ತಾಲ್ಲೂಕಿನ ಸಖರಾಯಪಟ್ಟಣ ಹೋಬಳಿಯ ಬಾಣೂರು ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಪ್ರೌಢಶಾಲೆ ಯಲ್ಲಿ ಏರ್ಪಡಿಸಲಾಗಿದ್ದ ಹಿರಿಯ ವಿದ್ಯಾರ್ಥಿಗಳ ಸಮ್ಮೀಲನ, 2023-24ನೇ ಸಾಲಿನ ವಿದ್ಯಾರ್ಥಿ ಸಂಘ ಮತ್ತು ಶಾಲಾ ಸಂಸತ್ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡುತ್ತಿದ್ದರು.

ಶಿಕ್ಷಣ ಸಂಸ್ಥೆಯ ಬೆಳವಣಿಗೆಯಲ್ಲಿ ಹಳೆಯ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದುದು. ಹಿರಿಯ ವಿದ್ಯಾರ್ಥಿ ಗಳು ಒಂದು ಶಿಕ್ಷಣ ಸಂಸ್ಥೆಯ ಅತ್ಯುತ್ತಮ ರಾಯಬಾರಿಗಳು. ಶೈಕ್ಷಣಿಕ ಬೆಳವಣಿಗೆಯ ಜೊತೆ ಜೊತೆಯಲ್ಲಿ ಸಾಮಾಜಿಕ ಕಳಕಳಿ ಮತ್ತು ಸೇವಾ ಮನೋಭಾವದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹಿರಿಯ ವಿದ್ಯಾರ್ಥಿ ಸಂಘ ಸಹಕಾರಿಯಾಗಲಿದೆ ಎಂದರು.

ಹಿರಿಯ ವಿದ್ಯಾರ್ಥಿಗಳು ತಮ್ಮ ಕೆಲಸದ ಒತ್ತಡದ ನಡುವೆಯೂ ಶಾಲೆಯ ಕಾರ್ಯಗಳಲ್ಲಿ ತೊಡಗಿಸಿಕೊಳ್ಳು ವುದರಲ್ಲಿ ಹಿಂದೆ ಸರಿದಿಲ್ಲ. ಜೊತೆಗೆ ಶಿಕ್ಷಣ ಸಂಸ್ಥೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮುನ್ನೆಡೆಸುತ್ತಿರುವುದು ಅತ್ಯಂತ ಖುಷಿಯ ಸಂಗತಿ ಎಂದು ಹೇಳಿದರು.

Basaveshwar High School ಸಖರಾಯಪಟ್ಟಣ ಭಾಗಗಳ ಹಲವು ಗ್ರಾಮಗಳಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಕ್ಕೆ ಕೊರತೆಯಾಗುತ್ತಿರುವುದು ಗಮನಹರಿಸಲಾಗಿದೆ. ಇವುಗಳ ಶೀಘ್ರ ಪರಿಹಾರಕ್ಕೆ ಪೂರಕವಾಗಿ ಕೆಲಸ ಮಾಡುವ ಜೊತೆಗೆ ಗ್ರಾಮಸ್ಥರಿಗೆ ಸ್ಪಂದಿಸುವ ರೀತಿಯಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದು ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಮಾತನಾಡಿ ಹಿರಿಯ ವಿದ್ಯಾರ್ಥಿ ಸಂಘವು ವಾರ್ಷಿಕ ಸಭೆಗಳಲ್ಲಿ ಭಾಗವಹಿಸಬೇಕು. ಇಂತಹ ಕಾರ್ಯಕ್ರಮಗಳಿಂದ ಕಾಲೇಜಿನ ಚಟುವಟಿಕೆಗಳು ಯಶಸ್ವಿಯಾಗಲು ಸಾಧ್ಯವಾಗುತ್ತದೆ. ಶಾಲೆಯಲ್ಲಿ ಉತ್ತಮ ಯೋಜನೆಗಳನ್ನು ಹಮ್ಮಿಕೊಳ್ಳಬೇಕು ಇದರಿಂದ ಶಾಲೆಗೆ ಮನ್ನಣೆ ಸಿಗುವುದರ ಜೊತೆಗೆ ಅಭಿವೃದ್ದಿಯಾಗುತ್ತದೆ ಎಂದರು.

ಶಾಲೆಯ ಮುಖ್ಯ ಶಿಕ್ಷಕ ಎ.ಸಿ.ವಸಂತ್ ಪ್ರಾಸ್ತಾವಿಕವಾಗಿ ಮಾತನಾಡಿ ಶಾಲೆಯ ಸರ್ವತೋಮುಖ ಬೆಳವಣ ಗೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದದ್ದು, ಹಳೆ ವಿದ್ಯಾರ್ಥಿಗಳು ಕಲಿತ ಶಾಲೆಯನ್ನು ಬೆಳೆಸಬೇಕು. ಪರಸ್ಪರ ಸಂಪರ್ಕ ಇಟ್ಟುಕೊಳ್ಳಬೇಕು ಎಂದು ಸಲಹೆ ಮಾಡಿದರು.

ಬಾಣೂರು ಗ್ರಾಮದಲ್ಲಿ ವಿದ್ಯಾರ್ಥಿನಿಯರಿಗೆ ತಂಗುವ ಸಂಬಂಧ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ ಇಲ್ಲದಿರುವ ಸಂಬಂಧ ಶಾಸಕರಿಗೆ ಮನವಿ ಮಾಡಿದ ವೇಳೆ ಶಾಸಕರು ಮುಂದಿನ ಕೆಲವು ತಿಂಗಳಲ್ಲಿ ಹಾಸ್ಟೆಲ್ ನಿರ್ಮಾಣ ಮಾಡುವ ಮೂಲಕ ವಿದ್ಯಾರ್ಥಿನಿಯರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ವಿದ್ಯಾರ್ಥಿ ಬಿ.ಹೆಚ್.ಗಂಗಾಧರಪ್ಪ ಹಿರಿಯರ ಮಾರ್ಗದರ್ಶನದಲ್ಲಿ ನಮಗೆ ನೀಡಿದ ಜವಾಬ್ದಾರಿಯನ್ನು ಮುಂದುವರೆಸಿಕೊಂಡು ಹೋಗುವುದಾಗಿ ಭರವಸೆ ನೀಡಿದರು.

ಇದೇ ವೇಳೆ 2023-24ನೇ ಸಾಲಿನ ಹಿರಿಯ ವಿದ್ಯಾರ್ಥಿ ಸಂಘಧ ರಚನೆ, ಉಪನ್ಯಾಸಕರ ಮತ್ತು ಆಡಳಿತ ಮಂಡಳಿಯವರ ಸಮ್ಮುಖದಲ್ಲಿ ನಡೆಯಿತು. ಶಾಲೆಯ ನಿವೃತ್ತ ಶಿಕ್ಷಕ ಬಿ.ಹೆಚ್.ಸೋಮಶೇಖರಪ್ಪ ಶಾಲಾ ಸಂಸತ್ ಹಾಗೂ ವಿದ್ಯಾರ್ಥಿ ಸಂಘಕ್ಕೆ ಚಾಲನೆ ನೀಡಿದರು.

ಎಸ್.ಎಲ್.ಬೋಜೇಗೌಡ ವಿದ್ಯಾರ್ಥಿ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಲೇಖಕಿ ಶ್ರೀಮತಿ ರೂಪ ಹೊಸದುರ್ಗ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಶ್ರೀರಂಗನಾಥಸ್ವಾಮಿ, ಬಿಸಿಎಂ ಇಲಾಖೆ ಅಧಿಕಾರಿ ವೈ.ಸೋಮಶೇಖರ್, ಬೀರೂರು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಗಂಗಾಧರ್, ಶಾಲೆಯ ನಿವೃತ್ತ ಶಿಕ್ಷಕರಾದ ಎಸ್.ಎಂ.ಮಲ್ಲೇಶಪ್ಪ, ಡಿ.ವಿ.ಈಶ್ವರಪ್ಪ, ಹಚ್.ಎಸ್.ಕುಮಾರಪ್ಪ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ...