Saturday, September 28, 2024
Saturday, September 28, 2024

Shimoga BGS School ಶಿವಮೊಗ್ಗ ಬಿಜಿಎಸ್ ಶಾಲೆಯಲ್ಲಿ ಚುನಾವಣಾ ವ್ಯವಸ್ಥೆ ಪರಿಚಯಾತ್ಮಕ ಕಾರ್ಯಕ್ರಮ

Date:

Shimoga BGS School ಶಾಲೆಗಳಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನದ ಮೂಲಕ ಸಾಗಿದ್ದು ಮಕ್ಕಳಿಗೆ ಚಿಕ್ಕಂದಿನಿಂದಲೇ ಚುನಾವಣಾ ಮಜಲುಗಳನ್ನು ಅರಿಯಲು ಶಿವಮೊಗ್ಗ ಗುರುಪುರದ ಬಿಜಿಎಸ್ ಶಾಲೆಯಲ್ಲಿ ಮತದಾನ ಕಾರ್ಯಕ್ರಮ‌ ಶ್ಲಾಘನೆಗೆ ಕಾರಣವಾಗಿದೆ.

ಶಾಲೆಗಳಲ್ಲಿ ಆಯಾ ವರ್ಷದ ವಿದ್ಯಾರ್ಥಿ ನಾಯಕನ ಆಯ್ಕೆ ಪ್ರಕ್ರಿಯೆ ಚುನಾವಣೆಯ ಮೂಲಕ ಸಾಗುತ್ತದೆ. ಶಾಲೆಗಳಲ್ಲಿ ಮಕ್ಕಳಿಗೆ ಚುನಾವಣೆಯ ಅರಿವು, ಜಾಗೃತಿ ಮೂಡಿಸುವ ಮೂಲಕ ಮಕ್ಕಳಿಗೆ ದೇಶದ ರಾಜಕೀಯ ವ್ಯವಸ್ಥೆಯನ್ನು ತಿಳಿಯುವಲ್ಲಿ ಸಹಕಾರಿಯಾಗಿದೆ.

ಶಾಲಾ ಸಂಸತ್‌ ಚುನಾವಣೆ, ಚುನಾವಣಾ ಆಯೋಗದ ನೀತಿ ನಿಯಮಗಳನ್ವಯ ನಡೆಯುತ್ತಿದ್ದು ಬಹಳ ವಿಶೇಷವೆನಿಸುತ್ತದೆ. ಚುನಾವಣಾ ದಿನಾಂಕ ಘೋಷಣೆ, ನಾಮಪತ್ರ ಸಲ್ಲಿಕೆಗೆ ಗಡವು, ಹಿಂಪಡೆಯುವಿಕೆಗೆ ಅವಕಾಶ, ಚುನಾವಣಾ ಚಿಹ್ನೆ ನೀಡುವುದು, ಮತ ಪ್ರಚಾರಕ್ಕೆ ಅವಕಾಶ, ಮತದಾನ, ಫಲಿತಾಂಶ ಘೋಷಣೆ ಹೀಗೆ ನಿಯಮಬದ್ಧವಾಗಿ ಚುನಾವಣೆ ನಡೆಸಲಾಗುತ್ತದೆ. ಬಳಿಕ ಮಂತ್ರಿಮಂಡಲ ರಚನೆ ಹಾಗೂ ಖಾತೆ ಹಂಚಿಕೆ, ಜವಾಬ್ದಾರಿ ಹಂಚಿಕೆ ನಡೆಯಿತು.

Shimoga BGS School ಶಾಲೆಗಳಲ್ಲಿ ನಡೆದ ಚುನಾವಣೆಗಳ ಅನ್ವಯ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಖಾತೆಗಳ ಹಂಚಿಕೆ ಮಾಡಿ ಆಯಾ ವರ್ಷದ ಶಾಲಾ ಜವಾಬ್ದಾರಿ ವಹಿಸಲಾಗುತ್ತದೆ. ಪ್ರಧಾನ ಮಂತ್ರಿ, ಶಿಕ್ಷ ಣ ಮಂತ್ರಿ, ಸ್ವಚ್ಛತಾ ಮಂತ್ರಿ, ಗ್ರಂಥಾಲಯ ಪಾಲನೆ, ರಕ್ಷ ಣಾ ಮಂತ್ರಿ, ಆಹಾರ ಮಂತ್ರಿ ಹೀಗೆ ನಾನಾ ಖಾತೆಗಳನ್ನು ನೀಡಿ ಮಕ್ಕಳಿಗೆ ಜವಾಬ್ದಾರಿಯನ್ನು ನೀಡುವುದರಿಂದ ವರ್ಷವಿಡೀ ಶಾಲೆಯ ನಿರ್ವಹಣೆ ಮಾಡಲು ಶಿಕ್ಷ ಕರಿಗೆ ಸುಲಭವೆನಿಸುತ್ತದೆ.

ಬಿಜಿಎಸ್ ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸುರೇಶ್ ಎಸ್. ಹೆಚ್. ಮುಖ್ಯ ಚುನಾವಣಾ ಆಯುಕ್ತರಾಗಿ ಹಾಗೂ ಶಾಲೆಯ ಶಿಕ್ಷಕರಾದ ಮಾಲತೇಶ್ ಮತ್ತು ಸಂಯೋಜಕರಾದ ಶ್ರೀಮತಿ ಅಶ್ವಿನಿ ಮತದಾನ ಕೇಂದ್ರದ ಅಧಿಕಾರಿಗಳಾಗಿ ಮಾರ್ಗದರ್ಶನ ಮಾಡಿದರು.

ಇದೇ ಸಂದರ್ಭದಲ್ಲಿ ಇನ್ನು ಮುಂತಾದ ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...