National Agricultural Cooperative Market ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿ ಅಕ್ಕಿ ಸಿಗದೆ ಪರದಾಡುತ್ತಿರುವ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ನೆರವು ನೀಡಲು 3 ಕೇಂದ್ರೀಯ ಸಂಸ್ಥೆಗಳು ಮುಂದೆ ಬಂದಿವೆ.
ಕೇಂದ್ರೀಯ ಸ್ವಾಮ್ಯದ ಮೂರು ಸಂಸ್ಥೆಗಳಾದ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (ನಾಫೆಡ್), ರಾಷ್ಟ್ರೀಯ ಗ್ರಾಹಕರ ಸಹಕಾರ ಒಕ್ಕೂಟ (ಎನ್ ಸಿಸಿಎಫ್), ಮತ್ತು ಭಾರತೀಯ ಆಹಾರ ನಿಗಮ (ಎಫ್ ಸಿಐ) ರಾಜ್ಯ ಸರ್ಕಾರಕ್ಕೆ ಅಕ್ಕಿ ನೀಡಲು ತಾತ್ವಿಕ ಒಪ್ಪಿಗೆ ನೀಡಿವೆ ಎಂದು ತಿಳಿದುಬಂದಿದೆ.
National Agricultural Cooperative Market ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಕೇಂದ್ರೀಯ ಸಂಸ್ಥೆಗಳ ಅಧಿಕಾರಿಗಳು ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.
ಆದರೆ, ಮೂರು ಸಂಸ್ಥೆಗಳ ಅಕ್ಕಿಯ ದರ ಬಲು ದುಬಾರಿಯಾಗಿದ್ದು, ಸಾಗಾಣಿಕೆ ವೆಚ್ಚ ಸೇರಿ ಪ್ರತಿ ಕೆ.ಜಿ ಗೆ 40 ರೂ. ಅಧಿಕ ದಾಟುವ ಸಾಧ್ಯತೆ ಎಂದು ಹೇಳಲಾಗುತ್ತಿದೆ. ಇದು FCI ಪೂರೈಕೆ ಮಾಡುತ್ತಿದ್ದ ದರಕ್ಕಿಂತ ಹೆಚ್ಚಾಗಲಿದೆ ಎನ್ನಲಾಗಿದೆ