Saturday, December 6, 2025
Saturday, December 6, 2025

Central Finance Department ವಿವಿಧ ಅಭಿವೃದ್ಧಿ ಕ್ಷೇತ್ರಗಳಲ್ಲಿ ಬಂಡವಾಳ ಹೂಡಲು ಕೇಂದ್ರದಿಂದ ರಾಜ್ಯಕ್ಕೆ ₹3.647 ಕೋಟಿ ಅನುದಾನ

Date:

Central Finance Department ರಾಜ್ಯಗಳ ಬಂಡವಾಳ ವೆಚ್ಚಕ್ಕೆ ಉತ್ತೇಜನ ನೀಡಲು ಕೇಂದ್ರದ ಹಣಕಾಸು ಇಲಾಖೆಯು ಬಂಡವಾಳ ಹೂಡಿಕೆಗಾಗಿ ರಾಜ್ಯ ಗಳಿಗೆ ವಿಶೇಷ ನೆರವು 2023-24ರ ಯೋಜನೆಯಡಿ 16 ರಾಜ್ಯಗಳಿಗೆ ರೂ.56,415 ಕೋಟಿ ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ.

ಈ ಯೋಜನೆಯಡಿ ಕರ್ನಾಟಕಕ್ಕೆ ರೂ. 3,647 ಕೋಟಿ ಬಿಡುಗಡೆಗೊಳಿಸಲು ಅನುಮೋದನೆ ನೀಡಲಾಗಿದೆ

ಈ ಯೋಜನೆಯಡಿ ಈ ವರ್ಷ ರಾಜ್ಯಗಳಿಗೆ ರೂ. 1.3 ಲಕ್ಷ ಕೋಟಿ ನೀಡುವುದಾಗಿ ಬಜೆಟ್ ನಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಗಳಿಗೆ 50 ವರ್ಷಗಳ ಬಡ್ಡಿ ರಹಿತ ಸಾಲದ ರೂಪದಲ್ಲಿ ಈ ಮೊತ್ತ ನೀಡಲಾಗುತ್ತದೆ.

Central Finance Department ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ಹಣಕಾಸಿನ ನೆರವು ಈ ಯೋಜನೆಯನ್ನು ಹಣಕಾಸು ಸಚಿವಾಲಯವು 2020-21ರಲ್ಲಿ ಆರಂಭಿಸಿತು.
ಕೋವಿಡ್ -19 ಸಾಂಕ್ರಾಮಿಕದ ಸಂದರ್ಭದಲ್ಲಿ ರಾಜ್ಯಗಳ ಬಂಡವಾಳ ವೆಚ್ಚವನ್ನು ಹೆಚ್ಚಿಸುವ ಉದ್ದೇಶದಿಂದ ಈ ಯೋಜನೆಗೆ ಚಾಲನೆ ನೀಡಲಾಯಿತು.

ಶಿಕ್ಷಣ, ನೀರಾವರಿ, ನೀರು ಸರಬರಾಜು, ಆರೋಗ್ಯ, ವಿದ್ಯುತ್ , ರಸ್ತೆ, ಸೇತುವೆಗಳು, ರೈಲ್ವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆ ಯೋಜನೆಗಳಿಗೆ ಈ ಮೊತ್ತವನ್ನು ನಿಗದಿಪಡಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...