Monday, February 2, 2026
Monday, February 2, 2026

CM Siddharamaih ಹಿಂದಿನ ಸರ್ಕಾರದ ಕೆಲವು ಹಗರಣಗಳ ಮರು ತನಿಖೆ – ಸಿದ್ಧರಾಮಯ್ಯ

Date:

CM Siddharamaih ಕೊಟ್ಟ ಮಾತಿನಂತೆ ಒಂದು ಗ್ಯಾರಂಟಿಯನ್ನು ಈಗಾಗಲೇ ಜಾರಿ ಮಾಡಿದ್ದೇವೆ. ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರುತ್ತೇವೆ. ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 15 ರ ನಂತರ ಜಾರಿ ಮಾಡಲಾಗುವುದು. ಈ ಸಂಬಂಧ ಈಗಾಗಲೇ ಅರ್ಜಿ ಕರೆದಿದ್ದು, ಅರ್ಜಿಗಳು ಸ್ವೀಕಾರವಾಗುತ್ತಿವೆ. ಅರ್ಜಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಯೋಜನೆಯನ್ನು ಜಾರಿಗೆ ತರುತ್ತೇವೆ.
ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಷಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆಯನ್ನು ಕೈಗೊಳ್ಳಲಾಗುವುದು. ಅಂದಿನ ಆರೋಗ್ಯ ಸಚಿವ ಡಾ|| ಸುಧಾಕರ್ ಅವರು ಅಲ್ಲಿ ಸತ್ತಿರುವುದು ಇಬ್ಬರೇ ಎಂದಿದ್ದರು, ಆದರೆ ಸತ್ತವರ ಸಂಖ್ಯೆ ಮೂವತ್ತಕ್ಕೂ ಹೆಚ್ಚಿತ್ತು.
CM Siddharamaih ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಮೃತರ ಕುಟುಂಬಗಳಿಗೆ ನ್ಯಾಯ ಒದಗಿಸಲು ಪ್ರಯತ್ನಮಡುತ್ತೇವೆ.
ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40% ಕಮಿಷನ್, ಕೊರೊನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪಿಎಸ್ಐ ನೇಮಕಾತಿ ಹಗರಣ ಹಾಗೂ ಬಿಟ್ ಕಾಯಿನ್ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಟ್ವೀಟ್ ಖಾತೆಯಲ್ಲಿ ‌ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...