Monday, February 2, 2026
Monday, February 2, 2026

Association of Working Journalists ಸಾಗರ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಆಯೋಜನೆ

Date:

Association of Working Journalists ಸಾಗರದ ಪ್ರೆಸ್ ಟ್ರಸ್ಟ್ ಆಫ್ ಸಾಗರ ಮತ್ತು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 01 ರಂದು ಬೆಳಿಗ್ಗೆ 10 ಗಂಟೆಗೆ ಅಣಲೆಕೊಪ್ಪದ ಪತ್ರಿಕಾ ಭವನದಲ್ಲಿ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. .

ಸಾಗರದ ಪ್ರೆಸ್ ಟ್ರಸ್ಟ್ ಆಫ್ ಸಾಗರ ಮತ್ತು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 01 ರಂದು ಬೆಳಿಗ್ಗೆ 10 ಗಂಟೆಗೆ ಅಣಲೆಕೊಪ್ಪದ ಪತ್ರಿಕಾ ಭವನದಲ್ಲಿ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. .

ಈ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಿಗೆ ಸನ್ಮಾನ, ಉಪನ್ಯಾಸ ಹಾಗೂ ಪತ್ರಿಕಾ ವಿತರಕರುಗಳಿಗೆ ಸೈಕಲ್ ವಿತರಣೆ ಕಾರ್ಯಕ್ರಮ ನಡೆಯಲಿದೆ.

ಶಾಸಕ ಗೋಪಾಲಕೃಷ್ಣ ಬೇಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಿಗಂದೂರು ಕ್ಷೇತ್ರದ ಧರ್ಮದರ್ಶಿ ಡಾ.ರಾಮಪ್ಪನವರು ಸೈಕಲ್ ವಿತರಿಸುವರು. ಶಿರಸಿಯ ‘ಜನಮಾಧ್ಯಮ’ ದಿನಪತ್ರಿಕೆ ಸಂಪಾದಕ ಅಶೋಕ್ ಹಾಸ್ಯಗಾರ ಅವರು ‘ಮೌಲ್ಯಯುತ ಪತ್ರಿಕೋದ್ಯಮ’ ಕುರಿತು ಉಪನ್ಯಾಸ ನೀಡುವರು.

Association of Working Journalists ಪತ್ರಿಕಾ ವಿತರಕರುಗಳಿಗೆ ಹೊಳೆಯುವ ಜಾಕೇಟ್‌ಗಳನ್ನು ಉದ್ಯಮಿಗಳಾದ ಜಿನೇಶಕುಮಾರ್ ವಿತರಿಸುವರು. ಹಿರಿಯ ಪತ್ರಕರ್ತ ನಿಚಡಿ ಜಗದೀಶ್ ಅವರನ್ನು ಸನ್ಮಾನಿಸಲಾಗುವುದು. ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎಚ್.ವಿ.ರಾಮಚಂದ್ರರಾವ್ ಅಧ್ಯಕ್ಷತೆ ವಹಿಸುವರು.

ಶಿಮೂಲ್ ಅಧ್ಯಕ್ಷ ಶ್ರೀಪಾದ ಹೆಗಡೆ , ತಾ.ಪಂ.ಮಾಜಿ ಅಧ್ಯಕ್ಷ ಮಲ್ಲಿಕಾಜುನ ಹಕ್ರೆ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ರಾಯಲ್ ಬಿಲ್ರ‍್ಸ್ ನ ಮಹೇಶ್ ಮತ್ತು ಜಲೀಲ್, ನಗರಸಭೆ ಸದಸ್ಯರಾದ ಆರ್.ಶ್ರೀನಿವಾಸ್, ಪ್ರೇಮಾ ಕಿರಣ್ ಸಿಂಗ್, ಕೆ.ಸಿದ್ದಪ್ಪ, ನಗರಸಭೆ ಹಿರಿಯ ಅಭಿಯಂತರ ಎಚ್.ಕೆ.ನಾಗಪ್ಪ, ರಾಮಕೃಷ್ಣ ವಸತಿ ಶಾಲೆಯ ದೇವರಾಜ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ಎಸ್.ವಿ.ಹಿತಕರ ಜೈನ್, ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ರಮೇಶ್ ಎನ್., ಸಂಘದ ಕಾರ್ಯದರ್ಶಿ ಗಣಪತಿ ಶಿರಳಗಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಸಾರ್ವಜನಿಕರು, ಅಭಿಮಾನಿಗಳು, ಹಿತೈಷಿಗಳು ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಸಂಘದ ಕಾರ್ಯದರ್ಶಿ ಗಣಪತಿ ಶಿರಳಗಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...