Karnataka to Give Cash Instead of 5 kg Additional Rice ಅನ್ನಭಾಗ್ಯ ಯೋಜನೆಯಡಿ ಸದ್ಯ ನೀಡಲಾಗುತ್ತಿರುವ 5ಕೆಜಿ ಅಕ್ಕಿಯ ಜೊತೆಗೆ ಮಿಕ್ಕ ಐದು ಕೆಜಿ ಅಕ್ಕಿಗೆ ಬದಲಾಗಿ ಪ್ರತೀ ಕೆಜಿಗೆ 34 ರೂಪಾಯಿಗಳಂತೆ 170 ರೂಪಾಯಿಗಳನ್ನು ಬಿಪಿಎಲ್ ಕುಟುಂಬದ ಪ್ರತೀ ಸದಸ್ಯರಿಗೆ ನೀಡಲು ಇಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹಣವನ್ನು ಬಿಪಿಎಲ್ ಕಾರ್ಡಿನಲ್ಲಿ ಮನೆಯ ಮುಖ್ಯಸ್ಥ ಎಂದು ನಮೂದಿಸಿದವರ ಬ್ಯಾಂಕ್ ಖಾತೆಗೆ ಜುಲೈ ತಿಂಗಳಿಂದಲೇ ವರ್ಗಾವಣೆ ಮಾಡಲಾಗುವುದು.
ಹೆಚ್ಚುವರಿಯಾಗಿ ನೀಡಲು ತೀರ್ಮಾನಿಸಿದ್ದ 5 ಕೆಜಿ ಅಕ್ಕಿಯನ್ನು ಹೊಂದಿಸಲು ರಾಜ್ಯ ಸರ್ಕಾರಕ್ಕೆ ಇನ್ನಷ್ಟು ಸಮಯಬೇಕಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಕಿ ಕೊಡುವವರೆಗೂ ಹಣವನ್ನು ನೀಡಲಾಗುತ್ತದೆ. ಅಕ್ಕಿ ಸಿಕ್ಕ ನಂತರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನೇ ನೀಡುತ್ತೇವೆ.
Karnataka to Give Cash Instead of 5 kg Additional Rice ಕೇಂದ್ರ ಬಿಜೆಪಿ ಸರ್ಕಾರ ನಮ್ಮ ಗ್ಯಾರಂಟಿಗಳನ್ನು ವಿಫಲಗೊಳಿಸಲು ಸತತವಾಗಿ ಯತ್ನಿಸುತ್ತಿದೆ. ಕೇಂದ್ರದ ಗೋದಾಮುಗಳಲ್ಲಿ ಅಕ್ಕಿ ಹುಳ ಹಿಡಿಯುತ್ತಿದ್ದರೂ ಕನ್ನಡಿಗರಿಗೆ ನೀಡಲು ತಯಾರಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿಗೆ ತಪ್ಪುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ತಿಳಿಸಿದ್ದಾರೆ.