Monday, February 2, 2026
Monday, February 2, 2026

DVS College Shivamogga ವಿಜ್ಞಾನದ ವಿದ್ಯಾರ್ಥಿಗಳು ಸಂಶೋಧನೆಯಲ್ಲಿ ಆಸಕ್ತಿ ವಹಿಸಬೇಕು-ಡಾ.ಮಂಜುನಾಥ್

Date:

DVS College Shivamogga ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರ ಮುಂದುವರೆದಿದ್ದು, ವಿಜ್ಞಾನ ಅಧ್ಯಯನದ ವಿದ್ಯಾರ್ಥಿಗಳು ಸಂಶೋಧನಾ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಬೆಂಗಳೂರಿನ ರಾಷ್ಟ್ರೀಯ ಅಂತರಿಕ್ಷಯಾನ ಪ್ರಯೋಗಾಲಯದ ಹಿರಿಯ ವಿಜ್ಞಾನಿ ಡಾ. ಸಿ.ಎಂ.ಮಂಜುನಾಥ ಹೇಳಿದರು.

ಶಿವಮೊಗ್ಗ ನಗರದ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಭೌತಶಾಸ್ತ್ರ ವಿಭಾಗದ ವತಿಯಿಂದ “ವಿಮಾನಯಾನ ಎಷ್ಟು ಸುರಕ್ಷಿತ” ವಿಷಯ ಕುರಿತು ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪನ್ಯಾಸ ನೀಡಿದರು.

ಅಂತರಿಕ್ಷ ಕ್ಷೇತ್ರದಲ್ಲಿ ಹೆಚ್ಚಿನ ವಿಷಯ ಕಲಿಕೆಯ ಜತೆಯಲ್ಲಿ ಉನ್ನತ ಸಾಧನೆ ಮಾಡಲು ಅವಕಾಶ ಇರುತ್ತದೆ. ವಿಮಾನಯಾನ ಕುರಿತು ಹೆಚ್ಚಿನ ಸಂಶೋಧನಾ ಮನೋಭಾವ ಬೆಳೆಸಿಕೊಳ್ಳಬೇಕು. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುತ್ತಿರುವ ಅಭಿವೃದ್ಧಿಗಳ ಬಗ್ಗೆ ನಿರಂತರವಾಗಿ ತಿಳಿದುಕೊಳ್ಳಬೇಕು ಎಂದು ತಿಳಿಸಿದರು.

DVS College Shivamogga ಕಾರ್ಯಕ್ರಮ ಉದ್ಘಾಟಿಸಿದ ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ವಿಜ್ಞಾನ ವಿದ್ಯಾರ್ಥಿಗಳು ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ದೃಷ್ಠಿಯಿಂದ ಶೈಕ್ಷಣಿಕ ಹಂತದಲ್ಲಿ ಹೆಚ್ಚಿನ ಗಮನ ವಹಿಸಿ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಶಿವಮೊಗ್ಗದಲ್ಲಿಯೂ ವಿಮಾನಯಾನ ಹಾರಾಟ ಆರಂಭಗೊಳ್ಳಲಿದೆ.

ಆಸಕ್ತಿಕರ ವಿಷಯಗಳ ಬಗ್ಗೆ ವಿಜ್ಞಾನಿಗಳಿಂದ ತಿಳಿದುಕೊಳ್ಳಬೇಕು ಎಂದರು.
ದೇಶಿಯ ವಿದ್ಯಾಶಾಲಾ ಸಮಿತಿ ಜಂಟಿ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯ ಹಾಗೂ ಉನ್ನತ ಶಿಕ್ಷಣದ ಬಗ್ಗೆ ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ವಿಮಾನಯಾನ ಕ್ಷೇತ್ರದಲ್ಲಿ ಇರುವ ಅವಕಾಶಗಳ ಬಗ್ಗೆ ಅರಿತುಕೊಂಡು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳಲ್ಲಿ ಸಂಶೋಧನಾ ಕ್ಷೇತ್ರಗಳಲ್ಲಿ ಆಸಕ್ತಿ ಹೆಚ್ಚಿಸುವ ಆಶಯದಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ದೃಷ್ಠಿಯಿಂದ ಉಪನ್ಯಾಸ ಹಾಗೂ ತರಬೇತಿ ಕಾರ್ಯಾಗಾರಗಳನ್ನು ನಿರಂತರವಾಗಿ ಆಯೋಜಿಸಲಾಗುವುದು ಎಂದು ಹೇಳಿದರು.

ದೇಶಿಯ ವಿದ್ಯಾಶಾಲಾ ಸಮತಿಯ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ದೇಶಿಯ ವಿದ್ಯಾಶಾಲಾ ಸಮಿತಿ ಖಜಾಂಚಿ ಬಿ.ಗೋಪಿನಾಥ್, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎ.ಎಸ್.ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...