Saturday, June 21, 2025
Saturday, June 21, 2025

Department of Kannada and Culture ಜುಲೈ 2 ರಂದು ಫ.ಗು.ಹಳಕಟ್ಟಿ ಜಯಂತಿ ಆಚರಣೆ ಆಯೋಜನೆ

Date:

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಜುಲೈ 02 ರಂದು ಬೆಳಗ್ಗೆ 11ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಡಾ. ಫ.ಗು.ಹಳಕಟ್ಟಿರವರ ಜನ್ಮದಿನದ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಇವರು ನೆರವೇರಿಸುವರು. ಶಾಸಕರಾದ ಎಸ್.ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಜನಪ್ರತಿನಿಧಿಗಳು, ಪಾಲಿಕೆ ಮಹಾಪೌರರು ಸೇರಿದಂತೆ ಹಲವಾರು ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

Department of Kannada and Culture ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ. ಸಿಇಓ, ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿರುವರು.

ಅಂದು ನಿವೃತ್ತ ಉಪನ್ಯಾಸಕರು ಹಾಗೂ ಸಾಹಿತಿಗಳಾದ ಚಿಕ್ಕಮಗಳೂರು ಬಿ.ತಿಪ್ಪೇರುದ್ರಪ್ಪರವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...