Rotary Club of Shivamogga ಸರ್ಕಾರಿ ಶಾಲೆ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣದ ಜತೆಗೆ ಅಗತ್ಯ ವಸ್ತುಗಳನ್ನು ಒದಗಿಸಿದಾಗ ಪರಿಪೂರ್ಣ ವಿದ್ಯಾರ್ಥಿಯಾಗಿಸಲು ಸಾಧ್ಯ ಹಾಗೂ ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಗುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಹೇಳಿದರು.
ಶಿವಮೊಗ್ಗದ ಕೊಮ್ಮನಾಳು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಶಾಲಾ ಬ್ಯಾಗ್, ಲೇಖನ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದರು.
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ನಿರಂತರವಾಗಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದೆ. ಸರ್ಕಾರಿ ಶಾಲೆಗಳ ಮಕ್ಕಳಿಗೆ ಅನುಕೂಲವಾಗುವಂತೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿದೆ ಎಂದು ತಿಳಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆ ಮಕ್ಕಳಲ್ಲಿ ಪ್ರತಿಭಾವಂತರಿದ್ದು, ಸೂಕ್ತ ವೇದಿಕೆಗಳನ್ನು ಕಲ್ಪಿಸುವ ಕೆಲಸ ಆಗಬೇಕು. ಸಂಘ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ಗುರುತಿಸಿ ನೆರವು ನೀಡಿದಾಗ ಶಾಲೆಗಳ ಅಭಿವೃದ್ಧಿ ಆಗುತ್ತದೆ ಎಂದರು.
Rotary Club of Shivamogga ಇದೇ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ಹಾಗೂ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಕಾರ್ಯದರ್ಶಿ ಕುಮಾರಸ್ವಾಮಿ ಹಾಗೂ ಪದಾಧಿಕಾರಿಗಳು, ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.