Tuesday, December 16, 2025
Tuesday, December 16, 2025

DVS Evening College ವೃತ್ತಿನಿರತರಿಗೆ ಸಂಜೆ ಕಾಲೇಜಿನ ಮಾಹಿತಿ ತಲುಪಿಸಬೇಕು-ಎಸ್.ರಾಜಶೇಖರ್

Date:

DVS Evening College ಅನೇಕ ಕಾರಣಗಳಿಂದ ಶಿಕ್ಷಣದಿಂದ ವಂಚಿತರಾಗುವ ವಿದ್ಯಾರ್ಥಿಗಳಿಗೆ ಸಂಜೆ ಕಾಲೇಜಿನಲ್ಲಿ ಶಿಕ್ಷಣ ಸೌಲಭ್ಯ ಇರುವ ಬಗ್ಗೆ ಮಾಹಿತಿ ನೀಡುವ ಜತೆಯಲ್ಲಿ ಅಧ್ಯಯನ ನಡೆಸಲು ಪ್ರೋತ್ಸಾಹಿಸಬೇಕು ಎಂದು ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಹೇಳಿದರು.

ಶಿವಮೊಗ್ಗ ನಗರದ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಸಂಜೆ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಸಾಂಪ್ರದಾಯಿಕ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಪದವಿ ಶಿಕ್ಷಣ ಪಡೆಯಲು ಆಸಕ್ತಿ ಇದ್ದರೂ ಕುಟುಂಬ ನಿರ್ವಹಣೆಯ ಕಾರಣಕ್ಕಾಗಿ ಕೆಲಸ ಮಾಡಬೇಕಾಗುತ್ತದೆ. ಅಂತಹವರಿಗೆ ಸಂಜೆ ಕಾಲೇಜಿನ ಬಗ್ಗೆ ಮಾಹಿತಿ ಒದಗಿಸಬೇಕು. ಇದರಿಂದ ಪದವಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಡಿವಿಎಸ್ ಸಂಜೆ ಕಾಲೇಜಿಗೆ ಅವಶ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲು ದೇಶಿಯ ವಿದ್ಯಾಶಾಲಾ ಆಡಳಿತ ಮಂಡಳಿ ಸಂಪೂರ್ಣ ಶ್ರಮಿಸಲಿದೆ. ಸಂಜೆ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಗಳಿಸುವ ಮೂಲಕ ಕಾಲೇಜಿನ ಕೀರ್ತಿ ಹೆಚ್ಚಿಸಬೇಕು ಎಂದರು.

DVS Evening College ದೇಶಿಯ ವಿದ್ಯಾಶಾಲಾ ಸಮಿತಿ ಸಹ ಕಾರ್ಯದರ್ಶಿ ಡಾ. ಎ.ಸತೀಶ್‌ಕುಮಾರ್ ಶೆಟ್ಟಿ ಮಾತನಾಡಿ, ಸಾಂಪ್ರದಾಯಿಕ ಆಚರಣೆಯಂತಹ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ಪ್ರತಿಭೆ ಪ್ರದರ್ಶನಕ್ಕೆ ಉತ್ತಮ ವೇದಿಕೆ ಒದಗಿಸುತ್ತದೆ. ಎಲ್ಲ ವಿದ್ಯಾರ್ಥಿಗಳು ಪರಸ್ಪರ ಸ್ನೇಹ ಭಾವವನ್ನು ಹೆಚ್ಚಿಸಿಕೊಳ್ಳಲು ನೆರವಾಗುತ್ತದೆ. ಬದುಕಿನ ಸುಂದರ ಕ್ಷಣಗಳನ್ನು ನೆನೆಪಿಸಿಕೊಳ್ಳುವ ಉತ್ತಮ ಭಾವನೆಗಳನ್ನು ಮನಸ್ಸಿನಲ್ಲಿ ಮೂಡಿಸುತ್ತದೆ ಎಂದು ಹೇಳಿದರು.

ಡಿವಿಎಸ್ ಸಂಜೆ ಕಾಲೇಜಿನ ಪ್ರಾಚಾರ್ಯೆ ಡಾ. ಎ.ಟಿ.ಪದ್ಮೇಗೌಡ ಮಾತನಾಡಿ, 50ಕ್ಕೂ ಅಧಿಕ ವರ್ಷಗಳಿಂದ ಸಂಜೆ ಕಾಲೇಜನ್ನು ನಡೆಸುವ ಮೂಲಕ ಡಿವಿಎಸ್ ಆಡಳಿತ ಮಂಡಳಿಯು ಆಸಕ್ತ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಕಾರಣವಾಗಿದೆ. ಸಾಮಾಜಿಕ ಕಳಕಳಿಯೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದೆ ಎಂದು ತಿಳಿಸಿದರು.

ಸಾಂಪ್ರದಾಯಿಕ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಡಿವಿಎಸ್ ಸಂಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸಿದ್ದರು. ಡಾ. ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...