Thursday, June 18, 2026
Thursday, June 18, 2026

Dr.Pandit Puttarajkavi Gavai ಪುಟ್ಟರಾಜ ಗವಾಯಿಗಳ 13 ನೇ ಪುಣ್ಯ ಸ್ಮರಣೋತ್ಸವ ಆಯೋಜನೆ

Date:

Dr. Pandit Puttarajkavi Gavai ಸಾಗರ ರಸ್ತೆಯ ಡಾ. ಪಂಡಿತ ಪುಟ್ಟರಾಜಕವಿ ಗವಾಯಿಗಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯ ಮತ್ತು ವೀರೇಶ್ವರ ಪುಣ್ಯಾಶ್ರಮದಲ್ಲಿ ಜು. 07 ಮತ್ತು09 ರಂದು ಗಾನಯೋಗಿ ಶಿವಯೋಗಿ ಪಂಚಾಕ್ಷರಗವಾಯಿಗಳವರ 79 ನೇ ಹಾಗೂ ಪದ್ಮಭೂಷಣ ಪುಟ್ಟರಾಜಕವಿ ಗವಾಯಿಗಳ 13ನೇ ಪುಣ್ಯ ಸ್ಮರಣೋತ್ಸ ವದ ನಿಮಿತ್ತ ಉಭಯ ಗುರುಗಳ ಸಂಗೀತ ಸ್ವರ ಸಮಾರಾಧನೆ ಸಾಂಸ್ಕೃತಿಕ, ಧಾರ್ಮಿಕ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ಆನಂದಪುರ ಬೆಕ್ಕಿನಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮಿ, ಹೊನ್ನಾಳಿ ಹಿರೇಕಲ್ಮಠಶ್ರೀ ಡಾ. ಚನ್ನಮಲ್ಲಿಕಾರ್ಜುನ ಶಿವಚಾರ್ಯ ಸ್ವಾಮಿಗಳ ಸಾನ್ನಿಧ್ಯ ವಹಿಸುವರು.
ಶ್ರೀ ಅಭಿನವ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಚನ್ನಬಸವ ಮಹಾಸ್ವಾಮಿಗಳು, ಶ್ರೀ ಸದಾನಂದ ಶಿವಯೋಗಾಶ್ರಮ, ಡಾ. ಮಹಾಂತ ಸ್ವಾಮಿಗಳ ಸಮ್ಮುಖದಲ್ಲಿ ತೃತೀಯ ಪೀಠಾಧಿಪತಿ ಡಾ. ಕಲ್ಲಯ್ಯಜ್ಜ ಅವರ ಅದ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ.

Dr. Pandit Puttarajkavi Gavai ಅರ್ಚಕ ವೀರಭದ್ರ ಶಾಸ್ತ್ರಿ, ಶ್ರೀ ವೇದಘೋಷ ನಡೆಯಲಿದ್ದು, ಆಶ್ರಮದ ಅಂದ ಮಕ್ಕಳಿಂದ ಪ್ರಾರ್ಥನೆ ನಡೆಯಲಿದೆ. ಅತಿಥಿಗಳಾಗಿ ಶಾಸಕ ಎಸ್. ಚನ್ನಬಸಪ್ಪ ಮೇಯರ್ ಶಿವಕುಮಾರ್, ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಉಮೇಶ್ ಹೆಚ್. ರಾಜ್ಯ ಮಾಜಿ ಶಾಸಕರ ವೇದಿಕೆ ಅಧ್ಯಕ್ಷ ಹೆಚ್.ಎಂ. ಚಂದ್ರಶೇಖರಪ್ಪ ಮತ್ತು ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಈ ಸಂದರ್ಭದಲ್ಲಿ ಗದಗ ಪಣ್ಯಾಶ್ರಮದ ಹೇಮರಾಜಶಾಸ್ತ್ರಿ ಕಮಲಕಂದ ಶ್ರೀ ಅಂಬಾದಾಸ ಎಸ್. ಜಮಾದಾರ ಅವರಿಗೆ ಶ್ರೀ ಗುರುರಕ್ಷೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಗದಗ ವಿವಿ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಎಂ. ಲೋಕೇಶಪ್ಪ ಯಲವಟ್ಟ ಮತ್ತು ಕುಟುಂಬದಿಂದ ಗವಾಯಿಗಳವರಿಗೆ ತುಲಾಭಾರ ಸೇವೆ ನಡೆಯಲಿದೆ. ಜೊತೆಗೆ ವಿಶೇಷ ಸಂಗೀತ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...