Wednesday, April 23, 2025
Wednesday, April 23, 2025

Christ King School ಮಕ್ಕಳ ಮೃದು ಮನಸ್ಸಿಗೆ ಉನ್ನತ ಮಾರ್ಗದರ್ಶನ ನೀಡುವಲ್ಲಿ ಗುರುವಿನ ಪಾತ್ರ ಬಹಳ ಮುಖ್ಯ

Date:

Christ King School ಮಕ್ಕಳ ಮೃದು ಮನಸ್ಸನ್ನು ಸಮಾಜದ ಉನ್ನತದ ಬೆಳವಣಿಗೆಯ ಕಡೆ ಮಾರ್ಗದರ್ಶನ ತೋರಲು ಗುರುಗಳ ಪಾತ್ರ ಬಹಳ ಮುಖ್ಯವಾಗಲಿದೆ ಎಂದು ಶ್ರೀರಾಮಚಂದ್ರ ಮಿಷನ್ ಹಾರ್ಟ್ ಫುಲ್ ನೆಸ್‌ನ ಜಿಲ್ಲಾ ಸಂಚಾಲಕ ಆರ್.ಎಸ್.ಸತ್ಯನಾರಾಯಣ್ ಹೇಳಿದರು.

ಚಿಕ್ಕಮಗಳೂರು ಕೋಟೆ ಚನ್ನಪುರ ಸಮೀಪ ಕ್ರೈಸ್ತ ಕಿಂಗ್ ಶಾಲೆಯಲ್ಲಿ ಗುರುಪೂರ್ಣಿಮಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮನುಷ್ಯನ ಜೀವನದಲ್ಲಿ ಗುರುವು ಮಹತ್ವದ ಪಾತ್ರ ವಹಿಸುತ್ತಾರೆ. ಗುರುವನ್ನು ದೇವರಂತೆ ಪೂಜಿಸುವುದು ಭಾರತೀಯ ಸಂಸ್ಕೃತಿಯಲ್ಲಿದೆ. ಹಾಗಾಗಿ ಗುರುಪೂರ್ಣಿಮಾ ಬಹಳ ಮಹತ್ವವನ್ನು ಪಡೆದುಕೊಂಡಿದೆ ಎಂದು ಹೇಳಿದರು.

Christ King School ಬಹುತೇಕ ಜನರು ಗುರುವನ್ನು ತಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಪರಿಗಣಿಸುವ ಮೂಲಕ ತಮ್ಮ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವಾಗಿದೆ. ಗುರು ಪೂರ್ಣಿಮೆಗೆ ಧಾರ್ಮಿಕ ಪ್ರಾಮುಖ್ಯತೆ ಅಲ್ಲದೇ ಶೈಕ್ಷಣ ಕ ಮತ್ತು ವಿದ್ವಾಂಸರ ವೃಂದದಲ್ಲೂ ಮಹತ್ವವಿದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಶಾಲೆಯ ಪ್ರಾಂಶುಪಾಲೆ ಚಂದ್ರಪ್ರಭ ಮಾತನಾಡಿ ಜೀವನದ ನಿಜವಾದ ಮಾರ್ಗತೋರಿಸಲು ಗುರುಗಳ ಸಹಾಯ ಅವಶ್ಯಕತೆಯಿದೆ. ಭಾರತೀಯ ಸಂಸ್ಕೃತಿಯ ಪರಂಪರೆ, ಸಂಸ್ಕಾರ ಮತ್ತು ಹಿಂದಿನ ಗುರುಕುಲ ಶಿಕ್ಷಣ ವನ್ನು ಮರುಕಳಿಸುವುದು ಹಾಗೂ ಮಕ್ಕಳ ಉತ್ತಮ ಸಂಸ್ಕಾರ, ಮೌಲ್ಯಗಳನ್ನು ಬೆಳೆಸುವುದಾಗಿದೆ ಎಂದು ತಿಳಿಸಿದರು.

ಇದೇ ವೇಳೆ ವಿದ್ಯಾರ್ಥಿಗಳು ಹಿಂದೂ, ಮುಸ್ಲೀಂ ಹಾಗೂ ಕ್ರೈಸ್ತ ಧರ್ಮಗ್ರಂಥಗಳ ಮೂಲಕ ಗುರು ಪೂಣ ðಮಾ ಶುಭಾಶಯ ಕೋರಿದರು. ಬಳಿಕ ವಿದ್ಯಾರ್ಥಿಗಳು ಗುರುಬ್ರಹ್ಮ, ಗುರವೇ ನಮಃ ಸಂದೇಶವನ್ನು ಸಾರಿ ಶಿಕ್ಷಕರಿಗೆ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿ ಸಿ.ಹೆಚ್.ಶ್ರೀನಿವಾಸ್, ಮುಖ್ಯಶಿಕ್ಷಕಿ ಸುಮ, ಶಿಕ್ಷಕರಾದ ಮಂಜುಳಾ, ಹೆಚ್.ಎನ್.ಬಾನುಪ್ರಿಯಾ, ಬಿಂದುಶ್ರೀ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....